ತಂತ್ರಜ್ಞಾನ

ಸ್ಮಾರ್ಟ್​ಫೋನ್ ಮೂಲಕ ಟಿವಿ ಚಾನೆಲ್ ಬದಲಾಯಿಸುವುದು ಹೇಗೆ?

ಇನ್ನುಂದೆ ಟಿವಿ ರಿಮೋಟ್ ಕಳೆದು ಹೋದರೆ ಚಿಂತಿಸಬೇಕಿಲ್ಲ. ನಿಮ್ಮಲ್ಲಿ ಸ್ಮಾರ್ಟ್​ಫೋನ್ ಇದ್ದರೆ ಅದರ ಮೂಲಕ ಮನೆಯ ಟಿವಿಯನ್ನು ನೀವು ನಿಯಂತ್ರಿಸಬಹುದು. ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಟಿವಿ ರಿಮೋಟ್ ಆಗಿ ಬಳಸಬಹುದು.

ಗೂಗಲ್ ಟಿವಿ ಅಪ್ಲಿಕೇಶನ್‌ನ ಸಹಾಯದಿಂದ ನಿಮ್ಮ ಆಂಡ್ರಾಯ್ಡ್ ಟಿವಿಯನ್ನು ನೀವು ನಿಯಂತ್ರಿಸಬಹುದು. ಇಷ್ಟು ಮಾತ್ರವಲ್ಲದೆ ನೀವು ಆ್ಯಂಡ್ರಾಯ್ಡ್ ಜೊತೆಗೆ ಆ್ಯಪಲ್ ಐಫೋನ್ ನಲ್ಲೂ ಇದೇ ವಿಧಾನವನ್ನು ಅಳವಡಿಸಿಕೊಳ್ಳಬಹುದು.

ಆಂಡ್ರಾಯ್ಡ್ ಫೋನ್ ಅನ್ನು ರಿಮೋಟ್ ಆಗಿ ಪರಿವರ್ತಿಸುವುದು ಹೇಗೆ?

ಗೂಗಲ್ ಪ್ಲೇ ಸ್ಟೋರ್​ನಿಂದ ಗೂಗಲ್ ಟಿವಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ.ನಿಮ್ಮ ಟಿವಿ ಮತ್ತು ಮೊಬೈಲ್ ಅನ್ನು ಒಂದೇ ವೈ-ಫೈಗೆ ಸಂಪರ್ಕಿಸಿ. ಮನೆಯಲ್ಲಿ ವೈ-ಫೈ ಇಲ್ಲದಿದ್ದರೆ, ನೀವು ಬ್ಲೂಟೂತ್ ಮೂಲಕವೂ ಕನೆಕ್ಟ್ ಮಾಡಬಹುದು.ಮೊದಲು ಅಪ್ಲಿಕೇಶನ್‌ನಲ್ಲಿ ರಿಮೋಟ್ ಬಟನ್ ಕ್ಲಿಕ್ ಮಾಡಿ.ಈಗ ಸ್ಮಾರ್ಟ್​ಫೋನ್​ನಲ್ಲಿರುವ ಆ್ಯಪ್ ಸ್ಕ್ಯಾನ್ ಮಾಡಲು ಪ್ರಾರಂಭಿಸುತ್ತದೆ. ನಿಮ್ಮ ಟಿವಿ ಕಾಣಿಸಿಕೊಂಡ ತಕ್ಷಣ ಅದನ್ನು ಆಯ್ಕೆಮಾಡಿ.ನಂತರ ನಿಮ್ಮ ಟಿವಿ ಪರದೆಯ ಮೇಲೆ ಒಂದು ಕೋಡ್ ಕಾಣಿಸುತ್ತದೆ. ಅಪ್ಲಿಕೇಶನ್‌ನಲ್ಲಿ ಆ ಕೋಡ್ ಅನ್ನು ನಮೂದಿಸಿ ಮತ್ತು ಕನೆಕ್ಟ್ ಆಯ್ಕೆಯನ್ನು ಟ್ಯಾಪ್ ಮಾಡಿ.ಒಮ್ಮೆ ನಿಮ್ಮ ಫೋನ್ ಕನೆಕ್ಟ್ ಆದರೆ, ನೀವು ಅದನ್ನು ಸಾಮಾನ್ಯ ರಿಮೋಟ್‌ನಂತೆ ಬಳಸಲು ಸಾಧ್ಯವಾಗುತ್ತದೆ.

ಐಫೋನ್ ಅನ್ನು ರಿಮೋಟ್ ಆಗಿ ಪರಿವರ್ತಿಸುವುದು ಹೇಗೆ?

ನಿಮ್ಮ ಐಫೋನ್ ಮತ್ತು ಟಿವಿಯನ್ನು ಒಂದೇ ವೈ-ಫೈಗೆ ಸಂಪರ್ಕಪಡಿಸಿ.ಆ್ಯಪ್ ಸ್ಟೋರ್‌ನಿಂದ ಗೂಗಲ್ ಟಿವಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿರಿ.ಗೂಗಲ್ ಟಿವಿ ಅಪ್ಲಿಕೇಶನ್‌ನಲ್ಲಿ ಟಿವಿ ರಿಮೋಟ್ ಐಕಾನ್ ಮೇಲೆ ಟ್ಯಾಪ್ ಮಾಡಿ.ಈಗ ಸ್ಮಾರ್ಟ್​ಫೋನ್​ನಲ್ಲಿರುವ ಆ್ಯಪ್ ಸ್ಕ್ಯಾನ್ ಮಾಡಲು ಪ್ರಾರಂಭಿಸುತ್ತದೆ. ನಿಮ್ಮ ಟಿವಿ ಕಾಣಿಸಿಕೊಂಡ ತಕ್ಷಣ ಅದನ್ನು ಆಯ್ಕೆಮಾಡಿ.ನಿಮ್ಮ ಟಿವಿ ಪರದೆಯ ಮೇಲೆ 6 ಅಂಕಿಗಳ ಕೋಡ್ ಕಾಣಿಸುತ್ತದೆ. ಅಪ್ಲಿಕೇಶನ್‌ನಲ್ಲಿ ಕೋಡ್ ನಮೂದಿಸಿ ಮತ್ತು ಕನೆಕ್ಟ್ ಮಾಡಿ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago