ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ (ಮುಂಗಾರು) ಮತ್ತೆ ಚುರುಕು ಗೊಳ್ಳುತ್ತಿದ್ದು, ಈ ವಾರ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ (ಮುಂಗಾರು) ಮತ್ತೆ ಚುರುಕು ಗೊಳ್ಳುತ್ತಿದ್ದು, ಈ ವಾರ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಂಗಳವಾರ ರಾತ್ರಿ 8.30 ರವರೆಗೆ ನಗರದಲ್ಲಿ 18 ಮಿಮೀ ಮಳೆಯಾಗಿದ್ದು, ಈ ಪೈಕಿ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 15 ಮಿಮೀ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್ 8 ರವರೆಗೆ ಮಳೆಯಾಗಲಿದೆ. ಮುಂದಿನ 48 ಗಂಟೆಗಳ ಕಾಲ, ಉತ್ತರ ಒಳನಾಡು, ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಎ ಪ್ರಸಾದ್ ಅವರು ಹೇಳಿದ್ದಾರೆ.
IMD ನೀಡಿರುವ ಪ್ರಕಾರ, ಮಂಗಳವಾರ ರಾತ್ರಿ 8.30 ರವರೆಗೆ, ಸೇಡಂ (ಕಲಬುರಗಿ) 8 ಸೆಂಮೀ, ಬೀದರ್ 6 ಸೆಂಮೀ, ಕೋಟ (ಉಡುಪಿ) ಮತ್ತು ಚಿಂಚೋಳಿ (ಕಲಬುರಗಿ) ನಲ್ಲಿ ತಲಾ 5 ಸೆಂ.ಮೀ ಮಳೆ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಮುಂಗಾರು ದುರ್ಬಲ; ಸೆಪ್ಟೆಂಬರ್ 8 ರ ನಂತರ ಮಳೆ ಸಾಧ್ಯತೆ: ಐಎಂಡಿ ಮುಂದಿನ 24 ಗಂಟೆಗಳ ಕಾಲ ರಾಜ್ಯ ಕೆಲವು ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೀದರ್, ಕಲಬುರಗಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಗೆ ಧರೆಗುರುಳಿದ ಮರಗಳು ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಗೆ ನಾಲ್ಕು ಮರಗಳು ಧರೆಗುರುಳಿವೆ.
ಜೆಪಿ ನಗರ, ರಾಜರಾಜೇಶ್ವರಿ ನಗರ, ಎಚ್ಎಎಲ್ 2 ಹಂತಗಳಲ್ಲಿ ಮೂರು ಮರಗಳು ಉರುಳಿದ್ದರೆ, ಕೆಸಿ ಜನರಲ್ ಆಸ್ಪತ್ರೆ ಬಳಿ ಮತ್ತೊಂದು ಮರ ಧರೆಗುರುಳಿದೆ. ಪರಿಣಾಮ ದ್ವಿಚಕ್ರ ವಾಹನ ಹಾಗೂ ಕಾರಿಗೆ ಹಾನಿಯಾಗಿದೆ. ಈ ಸಂದರ್ಭದಲ್ಲಿ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಕಾರು ಚಾಲಕ ಹಾಗೂ ಬೈಕ್ ಸವಾರ ಅದೃಷ್ಟವಶಾತ್ ಪಾರಾಗಿದ್ದಾರೆ. ಮಳೆಯ ಪರಿಣಾಮ ಥಣಿಸಂದ್ರದ ಎರಡು ರಸ್ತೆಗಳು ಸೇರಿದಂತೆ ನಗರದ ಹಲವು ರಸ್ತೆಗಳು ಜಲಾವೃತಗೊಂಡಿದ್ದವು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…