ಮಂಗಳವಾರ ರಾತ್ರಿ ಸುರಿದ ಮಹಾ ಮಳೆಗೆ ಬೆಂಗಳೂರಿನ ಜನ ಅಕ್ಷರಶಃ ನಲುಗಿ ಹೋಗಿದ್ದರು. ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಕಾಳೇನ ಅಗ್ರಹಾರದ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡು ವಾಹನ ಸವಾರರು ಪರದಾಡಿದ್ದರು. ಎರಡು ದಿನದ ಬಳಿಕ ತಣ್ಣಗಿದ್ದ ಮಳೆರಾಯ ಇಂದು ಮತ್ತೆ ಗುಡುಗಿದ್ದು, ಪರಿಣಾಮ ಟೌನ್ ಹಾಲ್, ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಶಾಂತಿನಗರ, ಮೆಜೆಸ್ಟಿಕ್ ಸೇರಿ ಹಲವೆಡೆ ಜೋರು ಮಳೆ ಆಗಿದೆ. ವಾಹನ ಸವಾರರು, ಬೀದಿ ಬದಿ ವ್ಯಾಪಾರಿಗಳು ಪರದಾಡಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ಕೆಲ ದಿನಗಳಿಂದ ರಾಜ್ಯ ಹಲವೆಡೆ ಭಾರೀ ಮಳೆ ಆಗುತ್ತಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 8 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಮಳೆಯಿಂದಾಗಿ ಭಾಷಣ ಮೊಟಕುಗೊಳಿಸಿದ ಸಚಿವ ಕೆಹೆಚ್ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಭಾರತ್ ಜೋಡೋ ವರ್ಷದ ಸಂಭ್ರಮಾಚರಣೆ ಮೆರವಣಿಗೂ ಮಳೆರಾಯನ ಅಡ್ಡಿ ಪಡಿಸಿದ್ದಾನೆ. ಮಳೆಯಿಂದಾಗಿ ಆರಂಭದಲ್ಲೇ ಸಚಿವ ಕೆಹೆಚ್ ಮುನಿಯಪ್ಪ ಭಾಷಣ ಮೊಟಕುಗೊಳಿಸಿದರು. ಮಳೆ ಬರುತ್ತಿದ್ದಂತೆ ಕಾರ್ಯಕರ್ತರು ಚೆಲ್ಲಾಪಿಲ್ಲಿಯಾಗಿ ಹೋಗಿದ್ದಾರೆ.
ಮೈಸೂರು ರಸ್ತೆಯ, ದೀಪಾಂಜಲಿ ಮೇಟ್ರೋ ಸ್ಟೇಷನ್ ಬಳಿ ಕೇವಲ 20 ನಿಮಿಷ ಸುರಿದ ಮಳೆಗೆ ರಸ್ತೆ ಮೇಲೆಲ್ಲಾ ನೀರು ನಿಂತ್ತಿದ್ದು, ಪಾದಚಾರಿಗಳು ಪರದಾಡುವಂತಾಗಿದೆ. ಮಳೆ ಹಿನ್ನಲೆ ಕಬ್ಬನ್ ಪಾರ್ಕ್ ಸುತ್ತಮುತ್ತ ವಾಹನ ಸವಾರರು ಟ್ರಾಫಿಕ್ ಕಿರಿಕಿರಿ ಅನುಭವಿಸುವಂತಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…