ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಿದ್ಧರಾಮಯ್ಯ ಆಕ್ಷೇಪ; ಸಿಎಂ ಹೇಳಿದ್ದೇನು?

By: Ommnews

Date:

Share post:

ಬೆಂಗಳೂರು: ತಮಿಳುನಾಡು ಸಚಿವ, ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ‘ಸನಾತನ ಧರ್ಮ’ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವುದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ‘ಎಕ್ಸ್​​’ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ಮೋದಿ ಅವರ ಹೇಳಿಕೆ ಪ್ರಚೋದನಕಾರಿಯಾದುದು ಎಂದು ಉಲ್ಲೇಖಿಸಿದ್ದಾರೆ.

Advertisement
Advertisement
Advertisement

ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ. ವಿಷಯ – ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ. ನರೇಂದ್ರ ಮೋದಿ ಅವರು ಇನ್ನೂ ಆರ್​​ಎಸ್ಎಸ್​ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಸಿದ್ಧರಾಮಯ್ಯ ಎಕ್ಸ್​ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದಾರೆ

ಪ್ರಧಾನಿ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ಧಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section