ಚಲನಚಿತ್ರ

ಹಿಂದಿ ಪ್ರೇಕ್ಷಕರ ಮನಗೆದ್ದ ನಿಖಿಲ್​ ಕುಮಾರ್​; ‘ರೈಡರ್’ ಚಿತ್ರಕ್ಕೆ 100 ಮಿಲಿಯನ್​ ವೀಕ್ಷಣೆ

ಆರಂಭದಲ್ಲಿ ‘ರೈಡರ್’ ಚಿತ್ರ ಕೇವಲ ಕನ್ನಡದಲ್ಲಿ ಬಿಡುಗಡೆ ಆಗಿತ್ತು. ಆನಂತರ ಹಿಂದಿಗೆ ಡಬ್ ಆಯಿತು. ಮಾಸ್​ ಸಿನಿಮಾ ಇಷ್ಟಪಡುವ ಹಿಂದಿ ಪ್ರೇಕ್ಷಕರು ನಿಖಿಲ್ ಕುಮಾರ್​ ಅವರ ಈ ಸಿನಿಮಾವನ್ನು ಯೂಟ್ಯೂಬ್​ನಲ್ಲಿ ನೋಡಿ ಎಂಜಾಯ್​ ಮಾಡಿದ್ದಾರೆ. ಅವರ ಮುಂಬರುವ ಸಿನಿಮಾ ಮೇಲೆ ಇದರಿಂದ ನಿರೀಕ್ಷೆ ಹೆಚ್ಚಾಗಿದೆ.

Advertisement
Advertisement
Advertisement

ನಟ ನಿಖಿಲ್​ ಕುಮಾರ್​ ಅವರು ರಾಜಕೀಯದ ಜೊತೆ ಚಿತ್ರರಂಗದಲ್ಲಿ ಮತ್ತೆ ಆ್ಯಕ್ಟೀವ್​ ಆಗಿದ್ದಾರೆ. ಈ ಸಂದರ್ಭಕ್ಕೆ ಸರಿಯಾಗಿ ಅವರ ‘ರೈಡರ್’ ಸಿನಿಮಾ ಸದ್ದು ಮಾಡುತ್ತಿದೆ. ಅಂದಹಾಗೆ, ಈ ಸಿನಿಮಾ ತೆರೆಕಂಡಿದ್ದು 2021ರಲ್ಲಿ. ಆದರೂ ಕೂಡ ಈ ಚಿತ್ರದ ಬಗ್ಗೆ ಈಗ ಮತ್ತೆ ಸುದ್ದಿ ಜೋರಾಗಿದೆ. ಅದಕ್ಕೆ ಬಲವಾದ ಕಾರಣ ಕೂಡ ಇದೆ. 2 ವರ್ಷಗಳ ಹಿಂದೆ ರಿಲೀಸ್​ ಆಗಿದ್ದ ಈ ಚಿತ್ರಕ್ಕೆ ಹಿಂದಿ ಪ್ರೇಕ್ಷಕರು ಮನ ಸೋತಿದ್ದಾರೆ. ಅದಕ್ಕೆ ಸಾಕ್ಷಿ ಒದಗಿಸುತ್ತಿದೆ ಯೂಟ್ಯೂಬ್​ ವೀವ್ಸ್​. ಹೌದು, ‘ರೈಡರ್​’ ಚಿತ್ರದ ಹಿಂದಿ ವರ್ಷನ್​ ಅನ್ನು ಬರೋಬ್ಬರಿ 100 ಮಿಲಿಯನ್​ ಬಾರಿ ವೀಕ್ಷಣೆ ಮಾಡಲಾಗಿದೆ. ಅಂದರೆ, 10 ಕೋಟಿ ಬಾರಿ ಈ ಸಿನಿಮಾ ವೀಕ್ಷಣೆ ಕಂಡಿದೆ.

ನಿಖಿಲ್ ಕುಮಾರ್​ ಅವರು ‘ರೈಡರ್​’ ಸಿನಿಮಾದ ಹಿಂದಿ ಡಬ್ಬಿಂಗ್​ ವರ್ಷನ್​ ಮೂಲಕ ಉತ್ತರ ಭಾರತದಲ್ಲೂ ಖ್ಯಾತಿ ಗಳಿಸಿದ್ದಾರೆ. ಸ್ಯಾಂಡಲ್​ವುಡ್​ ಸಿನಿಮಾಗಳು ಕರುನಾಡಿನಲ್ಲೇ ಇಷ್ಟೊಂದು ವೀವ್ಸ್​ ಪಡೆಯುವುದು ವಿರಳ. ಅಂಥದ್ದರಲ್ಲಿ ನಿಖಿಲ್ ಕುಮಾರ್​ ನಟನೆಯ ‘ರೈಡರ್​’ ಸಿನಿಮಾ ಹಿಂದಿ ಭಾಷೆಯಲ್ಲಿ 100 ಮಿಲಿಯನ್ ಬಾರಿ ವೀಕ್ಷಣೆ ಕಂಡಿದೆ ಎಂಬುದು ಗಮನಾರ್ಹ ಸಂಗತಿ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಕರುನಾಡಿನಲ್ಲಿ ಮಾತ್ರವಲ್ಲದೇ ಹಿಂದಿ ಪ್ರೇಕ್ಷಕರ ವಲಯದಲ್ಲೂ ನಿಖಿಲ್​ ಕುಮಾರ್​ಗೆ ಫ್ಯಾನ್ಸ್​ ಇದ್ದಾರೆ ಎಂಬುದಕ್ಕೆ ಈ 100 ಮಿಲಿಯನ್​ ಸಾಕ್ಷಿ ಒದಗಿಸುತ್ತಿದೆ.

ಹೊಸ ಸಿನಿಮಾ ಕೆಲಸದಲ್ಲಿ ನಿಖಿಲ್​ ಬ್ಯುಸಿ:

ಇತ್ತೀಚೆಗಷ್ಟೇ ನಿಖಿಲ್ ಅವರ ಹೊಸ ಸಿನಿಮಾ ಸೆಟ್ಟೇರಿತು. ಆ ಸಿನಿಮಾ ಮೂಲಕ ಅವರು ಮತ್ತೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆಯಾದ ಲೈಕಾ ಪ್ರೊಡಕ್ಷನ್​ ಮೂಲಕ ನಿಖಿಲ್​ ಅವರ ಹೊಸ ಚಿತ್ರ ನಿರ್ಮಾಣ ಆಗುತ್ತಿದೆ. ಕಾಲಿವುಡ್​ನ ಖ್ಯಾತ ನಿರ್ದೇಶಕ ಲಕ್ಷ್ಮಣ್ ಅವರು ಈ ಸಿನಿಮಾದ ಸಾರಥ್ಯ ವಹಿಸಿಕೊಂಡಿದ್ದಾರೆ. ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿದೆ ಎಂಬುದು ವಿಶೇಷ. ಹಿಂದಿಯಲ್ಲೂ ಬಿಡುಗಡೆ ಆಗಲಿದೆ. ಆ ಮೂಲಕ ಹಿಂದಿ ಪ್ರೇಕ್ಷಕರಿಗೆ ನಿಖಿಲ್​ ಅವರು ಮತ್ತಷ್ಟು ಹತ್ತಿರ ಆಗಲಿದ್ದಾರೆ.ಆರಂಭದಲ್ಲಿ ‘ರೈಡರ್’ ಚಿತ್ರ ಕೇವಲ ಕನ್ನಡದಲ್ಲಿ ಬಿಡುಗಡೆ ಆಗಿತ್ತು. ಆನಂತರ ಈ ಸಿನಿಮಾ ಹಿಂದಿಗೆ ಡಬ್ ಆಯಿತು. ಹಿಂದಿ ಪ್ರೇಕ್ಷಕರು ನಿಖಿಲ್ ಕುಮಾರ್​ ಅವರನ್ನು ಯೂಟ್ಯೂಬ್​ನಲ್ಲಿ ನೋಡಿ ಎಂಜಾಯ್​ ಮಾಡಿದ್ದಾರೆ. ನಿರ್ದೇಶಕ ವಿಜಯ್ ಕುಮಾರ್ ಕೊಂಡ ಅವರು ‘ರೈಡರ್’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದರು. ಈ ಸಿನಿಮಾ ಪಕ್ಕಾ ಮಾಸ್ ಪ್ರೇಕ್ಷಕರಿಗೆ ಹೇಳಿ ಮಾಡಿಸಿದಂತಿತ್ತು. ತಮಿಳು ಹಾಗೂ ತೆಲುಗು ಚಿತ್ರಗಳಲ್ಲಿ ನಟಿಸಿದ್ದ ಕಾಶ್ಮೀರಾ ಪರದೇಶಿ ಅವರು ‘ರೈಡರ್​’ ಸಿನಿಮಾದಲ್ಲಿ ನಿಖಿಲ್​ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಕಾಶ್ಮೀರಾ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಚಿತ್ರದ ಹಾಡುಗಳು ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದವು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago