ಬೆಂಗಳೂರು: ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಜಾತಿ ಪದ್ದತಿ ನಾಶ ಆಗಬೇಕು. ಜಾತಿ ಪದ್ದತಿ ನಾಶವಾಗಲು ಅಂತರ್ಜಾತಿ ವಿವಾಹವೇ ಔಷಧಿ. ಸಂವಿಧಾನ ಕೂಡ ನಮ್ಮದು ಜಾತ್ಯತೀತ ಸಮಾಜ ಎಂದು ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಮಲಾ ಹಂಪಾನಾ ಸಾಹಿತ್ಯ ವೇದಿಕೆ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಬೆಳಕು ಬಿತ್ತಿದವರು’, ‘ಪ್ರಾಕೃತಾ ಕಥಾ ಸಾಹಿತ್ಯ’ ಮತ್ತು ‘the journey of life’ ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾಮಾಜಿಕ, ಆರ್ಥಿಕ ತಳಹದಿಯ ಮೇಲೆ ರೂಪುಗೊಳ್ಳದಿದ್ದರೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ ಎಂದಿದ್ದರು. ಹೀಗಾಗಿ ಸ್ವಾತಂತ್ರ್ಯದ ಉದ್ದೇಶ ಈಡೇರಬೇಕಾದರೆ ಸಮಾಜದಲ್ಲಿ ಅವಕಾಶ ಮತ್ತು ಸಂಪತ್ತು ಸಮಾನ ಹಂಚಿಕೆ ಆಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹಂಪಾ ನಾಗರಜಯ್ಯ, ಕಮಲಾ ಹಂಪನಾ, ಸಾಹಿತಿ ಬರಗೂರು ರಾಮಚಂದ್ರಪ್ಪ, ಲೇಖಕ ಜಿ.ಎನ್.ಮೋಹನ್ ಮತ್ತಿತರರಿದ್ದರು.