ಲೋಕಸಭೆ ಚುನಾವಣೆ,ಬಿಜೆಪಿ – ಜೆಡಿಎಸ್ ಮೈತ್ರಿಗೆ ಅಮಿತ್ ಷಾ ಒಪ್ಪಿಗೆ : ಬಿ.ಎಸ್.ಯಡಿಯೂರಪ್ಪ

By: Ommnews

Date:

Share post:

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೊಸ ಸಂಚಲನ ಒಂದನ್ನು ಸೃಷ್ಟಿಸಿದ್ದಾರೆ. ​

Advertisement
Advertisement
Advertisement

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಬಿಎಸ್ ವೈ ಕೇಂದ್ರ ಗೃಹ ಸಚಿವ ಅಮಿತ್ ಷಾರವರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಪ್ಪಿದ್ದಾರೆ. 4 ಸ್ಥಾನಗಳನ್ನು ಬಿಟ್ಟುಕೊಡಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಜೆಡಿಎಸ್​ ಜೊತೆಗಿನ ಮೈತ್ರಿಯಿಂದ ನಮಗೆ ಇನ್ನಷ್ಟು ಶಕ್ತಿ ಬರುತ್ತದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಈ ಮೈತ್ರಿ ಸಹಕಾರಯಾಗಲಿದೆ. ಈ ಸಂಬಂಧ ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿ ಮೂಲಗಳ ಪ್ರಕಾರ ಪ್ರಜ್ವಲ್​ ರೇವಣ್ಣ ಅನರ್ಹತೆ ಸಂಬಂಧ ವಕೀಲರೊಂದಿಗೆ ಚರ್ಚಿಸಲು ಇತ್ತೀಚಿಗೆ ದೇವೇಗೌಡರು ದೆಹಲಿಗೆ ತೆರಳಿದ್ದರು. ಈ ವೇಳೆ ಅವರು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕ ಚರ್ಚೆ ನಡೆದಿತ್ತು ಎನ್ನಲಾಗಿದೆ.

ಜೆಡಿಎಸ್​ ಪ್ರಾಬಲ್ಯ ಹೆಚ್ಚಿರುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಹಾಸನ ಹಾಗೂ ಮಂಡ್ಯದಲ್ಲಿ ಸ್ಪರ್ಧಿಸಬಹುದು ಎಂದು ಅಂದಾಜಿಸಲಾಗಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸುವುದಾಗಿ ಉಭಯ ನಾಯಕರ ನಡುವೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಒಂದು ವೇಳೆ ಬಿಜೆಪಿ ಹೈಕಮಾಂಡ್​ ದೇವೇಗೌಡರ ಷರತ್ತಿಗೆ ಒಪ್ಪಿದ್ದಲ್ಲಿ ಸೆಪ್ಟೆಂಬರ್​ 10ರ ನಂತರ ಮೈತ್ರಿ ನಿರ್ಧಾರ ಪ್ರಕಟವಾಗಲಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section