ರಾಜ್ಯ

ರಾಜ್ಯದ 196 ತಾಲೂಕುಗಳಲ್ಲಿ ಬರ ಇದೆ, ಎರಡ್ಮೂರು ದಿನದಲ್ಲಿ ಸಭೆ ನಡೆಯಲಿದೆ: ಸಚಿವ ಚಲುವರಾಯಸ್ವಾಮಿ

ಧಾರವಾಡ: ಶಾಸಕರು, ರೈತರಿಂದ ಬರಗಾಲ ಘೋಷಣೆಗೆ ಆಗ್ರಹ ಕೇಳಿ ಬಂದಿದೆ. ಈ ಬಗ್ಗೆ ಈಗಾಗಲೇ ಸಿಎಂ ಕ್ಯಾಬಿನೆಟ್ ಉಪಸಮಿತಿ ಮಾಡಿದ್ದಾರೆ. ಬರ ಘೋಷಣೆ ಸಂಬಂಧ ಎರಡ್ಮೂರು ದಿನದಲ್ಲಿ ಸಭೆ ನಡೆಯಲಿದೆ ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಕೃಷಿಮೇಳದಲ್ಲಿ ಮಾತನಾಡಿದ ಅವರು, 62 ತಾಲೂಕುಗಳನ್ನು ಬರ ಎಂದು ಘೋಷಣೆಗೆ ಅವಕಾಶವಿತ್ತು. ಆದರೆ ಇನ್ನೂ 130 ತಾಲೂಕುಗಳನ್ನು ಸೇರಿಸಲು ಮುಂದಾಗಿದ್ದೇವೆ. ರಾಜ್ಯದ 196 ತಾಲೂಕುಗಳಲ್ಲಿ ಬರ ಇದೆ. ಎಲ್ಲಾ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.ಬರ ಘೋಷಣೆ ಸಂಬಂಧ ಕೇಂದ್ರ ಸರ್ಕಾರಕ್ಕೆ ಮಾರ್ಗಸೂಚಿಯಲ್ಲಿ ಬದಲಾವಣೆ ಕೇಳಿದ್ದೇವೆ. ಎರಡು ಮೂರು ಬಾರಿ ಕೇಳಿದರೂ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದ್ದಾರೆ.

Advertisement
Advertisement
Advertisement

ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ ಸಚಿವ ಚಲುವರಾಯಸ್ವಾಮಿ

ರೈತರ ಬೆನ್ನಿಗೆ ನಿಲ್ಲುವ ಏಕೈಕ ಸಮರ್ಥ ನಾಯಕ ಸಿದ್ದರಾಮಯ್ಯ. ರೈತರಿಗೆ ಸಾಕಷ್ಟು ಸಮಸ್ಯೆ, ನೋವು ಇದೆ, ಸವಾಲುಗಳು ಇವೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ರೈತರಿಗೆ ನೆರವಾಗಿದ್ದರು. ಈ ಹಿಂದೆ ರಾಜ್ಯ ರೈತರ ಸಾಲ ಮನ್ನಾ ಮಾಡಿದ್ದರು. ಹಾಲಿನ ಸಬ್ಸಿಡಿ 5 ರೂ.ಗೆ ಏರಿಸಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲಬೇಕು. ರೈತರಿಗೆ ಜೆಡಿಎಸ್-ಬಿಜೆಪಿ ಏನು ಕೊಟ್ಟಿತು? ನೀವೇ ವಿಚಾರ ಮಾಡಿ ಎಂದರು.

ಕೊಟ್ಟ ಭರವಸೆಯಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದಾರೆ. ದೇಶದಲ್ಲಿ ಯಾರೂ ಮಾಡದ ಕಾರ್ಯಕ್ರಮವನ್ನ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಗ್ಯಾರಂಟಿಗಳ ಬಗ್ಗೆ ಪ್ರಧಾನಿ ಮೋದಿ, ವಿಪಕ್ಷದವರು ಟೀಕಿಸಿದ್ದರು. ಎಲ್ಲರ ಟೀಕೆಗಳನ್ನ ಮೆಟ್ಟಿನಿಂತು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇನ್ನೂ ಬರಗಾಲ ಘೋಷಣೆ ಮಾಡಿಲ್ಲ-ಸಿಎಂ ಸಿದ್ದರಾಮಯ್ಯ

ಬರ ಘೋಷಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಜ್ಯದಲ್ಲಿ ಇನ್ನೂ ಬರಗಾಲ ಘೋಷಣೆ ಮಾಡಿಲ್ಲ. ಕೆಲವು ನಿಯಮಾವಳಿ ಬದಲಾವಣೆಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ. ಆದರೆ ಕೇಂದ್ರ ಸರ್ಕಾರ ಉತ್ತರವನ್ನೇ ಕೊಟ್ಟಿಲ್ಲ ಎಂದರು.

ಕಳಸಾ-ಬಂಡೂರಿ, ಮಹದಾಯಿ ಯೋಜನೆಗೆ ಹೋರಾಟ ಆಗುತ್ತಿದೆ. ಒಂದು ಬಾರಿ ಮೋದಿ ಬಳಿ ಸರ್ವಪಕ್ಷದ ನಿಯೋಗ ಹೋಗಿದ್ದೆವು. ಆದರೆ ಪುಣ್ಯಾತ್ಮ ನರೇಂದ್ರ ಮೋದಿ ರಾಜಿ ಮಾಡಲೇ ಇಲ್ಲ. ಗೋವಾದವರನ್ನು ಪ್ರಧಾನಿ ಮೋದಿ ಕರೆದು ಮಾತಾಡಬೇಕಿತ್ತು. ಈಗ ಮತ್ತೊಮ್ಮೆ ಸರ್ವಪಕ್ಷ ನಿಯೋಗ ಹೋಗಬೇಕಿತ್ತು. ಭೇಟಿಗೆ ಸಮಯ ಕೊಡಿ ಅಂತಾ ಮೋದಿಗೆ ಪತ್ರ ಬರೆದಿದ್ದೇನೆ. ಆದರೆ ಪ್ರಧಾನಿ ಕಚೇರಿಯಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಯೋಜನೆಗೆ ಅರಣ್ಯ ಸಚಿವಾಲಯ ಕ್ಲಿಯರೆನ್ಸ್ ಮಾಡಬೇಕು. ಕ್ಲಿಯರೆನ್ಸ್​​ ಆದ ತಕ್ಷಣವೇ ಕಾಮಗಾರಿ ಆರಂಭಿಸುತ್ತೇವೆ. ಮಹದಾಯಿಗೆ ಅನುದಾನದ ಕೊರತೆ ಇಲ್ಲ ಎಂದು ತಿಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago