ಬೆಂಗಳೂರು : ಕರ್ನಾಟಕದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಬ್ಸಿಡಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಘೋಷಿಸಿದೆ.
ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ತಮ್ಮ ಆಯ್ಕೆಯ ಆಟೋ ರಿಕ್ಷಾ, ಟ್ಯಾಕ್ಸಿ ಅಥವಾ ಮೂರು-ನಾಲ್ಕು ಚಕ್ರದ ಗೂಡ್ಸ್ ವಾಹನವನ್ನು ಖರೀದಿಸಿದಾಗ ಆ ವಾಹನ ಮೊತ್ತದ ಶೇಕಡಾ 50 ರಷ್ಟು ಸಬ್ಸಿಡಿ ಅಥವಾ 3 ಲಕ್ಷ ರೂಪಾಯಿ ವರೆಗೆ ಸಬ್ಸಿಡಿ ಸಿಗಲಿದೆ.ಅಲ್ಲದೇ ಉಳಿದ ಮೊತ್ತಕ್ಕೆ ಸರ್ಕಾರವು ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಅವರಿಗೆ ಸಹಾಯ ಮಾಡುತ್ತದೆ.
ಅರ್ಹತೆಗಳು
1.ಯೋಜನೆಯ ಅರ್ಜಿದಾರರು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು.
2. ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
3. 18 ರಿಂದ 55 ವರ್ಷದವರಾಗಿರಬೇಕು.
4. ವಾರ್ಷಿಕ ಆದಾಯವು 4.5 ಲಕ್ಷಕ್ಕಿಂತ ಕಡಿಮೆ ಇರಬೇಕು.
5. ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ನೌಕರರಾಗಿರಬಾರದು.
ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿ, “ಚಾಲಕ ಚಾಲಕನಾಗಿ ಉಳಿಯಬಾರದು. ವಾಹನದ ಮಾಲೀಕರೂ ಆಗಬೇಕು. ಅವನು ತನ್ನ ಆಯ್ಕೆಯ 8 ಲಕ್ಷದವರೆಗಿನ ಮೌಲ್ಯದ ನಾಲ್ಕು ಚಕ್ರದ ವಾಹನವನ್ನು ಖರೀದಿಸಬಹುದು. ಸರ್ಕಾರವು 3 ಲಕ್ಷ ಸಹಾಯಧನವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.
ನಾವು ಸಾಲಕ್ಕೂ ಸಹಾಯ ಮಾಡುತ್ತೇವೆ. ಅವರು ಕಾರಿನ ಮೌಲ್ಯದ 10% ಮುಂಗಡ ಪಾವತಿಯನ್ನು ಮಾಡಬೇಕಾಗುತ್ತದೆ. ಉದಾಹರಣೆಗೆ, ಕಾರಿನ ಮೌಲ್ಯವು 8 ಲಕ್ಷ ರೂ ಆಗಿದ್ದರೆ, ಅವರು 80,000 ಆರಂಭಿಕ ಪಾವತಿಯನ್ನು ಮಾಡಬೇಕಾಗುತ್ತದೆ. ನಾವು 3 ಲಕ್ಷ ಸಬ್ಸಿಡಿ ನೀಡುತ್ತೇವೆ. ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ನೀಡಲು ಸಹಾಯ ಮಾಡುತ್ತೇವೆ.