ಜಿಲ್ಲೆ

ಶೀಘ್ರವೇ ಗದಗದಲ್ಲಿ ದೊಡ್ಡ ಪ್ರಮಾಣದ ಇಂಡಸ್ಟ್ರಿಯಲ್ ಎಸ್ಟೇಟ್ ನಿರ್ಮಾಣ: ಹೆಚ್‌ಕೆ ಪಾಟೀಲ್

ಗದಗ: ಜಿಲ್ಲೆಯಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗುವುದರ ಜೊತೆಗೆ ಬೆಳವಣಿಗೆಯಾಗಬೇಕಾಗಿದೆ. ಸಣ್ಣ ಕೈಗಾರಿಕೆ ಸಚಿವರ ಮಾಹಿತಿ ಪ್ರಕಾರ ದೊಡ್ಡ ಪ್ರಮಾಣದ ಇಂಡಸ್ಟ್ರಿಯಲ್ ಎಸ್ಟೇಟ್ ನಿರ್ಮಾಣ ಮಾಡಲು ಸಿದ್ಧತೆ ನಡೆಸಲಾಗಿದ್ದು, 216 ಎಕರೆ ಭೂಮಿಯನ್ನು ಗುರುತಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಕೆ ಪಾಟೀಲ್ ಹೇಳಿದರು.

Advertisement
Advertisement
Advertisement

ನಗರದ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕೈಗಾರಿಕಾ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಗದಗ ಉತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಉತ್ಪಾದನಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದ ಗದಗ ಜಿಲ್ಲೆಯು ಇಂದು ಉತ್ಪಾದನಾ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಅದರ ಪರಿಣಾಮ ಉದ್ಯೋಗ ಸೃಷ್ಟಿಯಲ್ಲೂ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಜಿಲ್ಲೆ ಈ ಮೊದಲು ಜಿನ್ನಿಂಗ್, ಸ್ಪಿನ್ನಿಂಗ್, ಕಾಟನ್ ಮಿಲ್, ರವಾ ಮಿಲ್, ಆಯಿಲ್ ಮಿಲ್‌ನಂತಹ ಉತ್ಪಾದನಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಆದರೆ ಇಂದು ಸ್ಥಳೀಯರು ಕೈಗಾರಿಕಾ, ಉದ್ಯಮ, ಉತ್ಪಾದನೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಉತ್ಪಾದನಾ ವ್ಯವಸ್ಥೆಗೆ ಕೈ ಹಾಕುತ್ತಿಲ್ಲ. ಹೀಗಾಗಿ ಉತ್ಪಾದನೆ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದೇವೆ ಎಂದರು.

ಉತ್ಪಾದನಾ ಕೈಗಾರಿಕಾ ಸ್ಥಾಪನೆ ಮಾಡಲು ಸ್ಥಳೀಯರು ಹೆಚ್ಚು ಹೆಚ್ಚು ಮುಂದೆ ಬರಬೇಕು. ಉತ್ಪಾದನಾ ಕ್ಷೇತ್ರದಲ್ಲಿ ತೊಡಗಿಕೊಂಡಾಗ ಮಾತ್ರ ಉದ್ಯೋಗ ಸೃಷ್ಟಿಯಾಗಲು ಸಾಧ್ಯವಾಗುತ್ತದೆ. ಈಗಾಗಲೇ ಸರ್ಕಾರ ಸಣ್ಣ ಕೈಗಾರಿಕೋದ್ಯಮಿಗಳಿಗೂ 4% ಬಡ್ಡಿ ದರದಲ್ಲಿ 5 ಕೋಟಿ ರೂ. ಹಣವನ್ನು ನೀಡುತ್ತಿದೆ. ಇಂತಹ ಸೌಲಭ್ಯಗಳನ್ನು ಪಡೆದುಕೊಂಡು ಉದ್ಯಮಿಗಳು ಹೊಸ ಉದ್ಯಮಗಳನ್ನು ಪ್ರಾರಂಭಿಸಬೇಕು ಎಂದು ಸಲಹೆ ನೀಡಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago