ಜಿಲ್ಲೆ

1 ತಿಂಗಳ ಕರೆಂಟ್ ಬಿಲ್ 10 ಲಕ್ಷ! – ಗ್ರಾಹಕ ಶಾಕ್

ಚಿಕ್ಕಮಗಳೂರು: ಆಗಸ್ಟ್ 1 ರಿಂದ ಸೆಪ್ಟೆಂಬರ್ 1 ರವರೆಗೆ ಒಂದು ತಿಂಗಳ ಕರೆಂಟ್ ಬಿಲ್ 10 ಲಕ್ಷ ರೂ. ಬಂದಿದ್ದು ಅಂಗಡಿ ಮಾಲೀಕ ಶಾಕ್ ಆಗಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ.

Advertisement
Advertisement
Advertisement

ಕಡೂರು ಪಟ್ಟಣದ ಉಳುಕಿನಕಲ್ಲು ಸಮೀಪದ ಡಾಗಾ ಕಾಂಪ್ಲೆಕ್ಸ್ನಲ್ಲಿನ ಮೋಹಿತ್ ಏಜೆನ್ಸಿಗೆ ಆಗಸ್ಟ್ ತಿಂಗಳ ವಿದ್ಯುತ್ ಬಿಲ್ 10,26,054 ರೂ. ಬಂದಿದೆ. ಪ್ರತಿ ತಿಂಗಳು ವಿದ್ಯುತ್ ಬಿಲ್ ಅಂದಾಜು 4,000 ದಿಂದ 4,500 ರೂ. ಮಾತ್ರ ಬರುತ್ತಿತ್ತು. ಆದರೆ ಆಗಸ್ಟ್ ತಿಂಗಳ ಬಿಲ್ ಏಕಾಏಕಿ 10 ಲಕ್ಷ ರೂ. ಬಂದಿದೆ. ಬಿಲ್ ಅವಧಿ 1/8/2023 ರಿಂದ 1/9/2023 ರವರೆಗೆ ಎಂದು ನಮೂದಿಸಲಾಗಿದೆ.

ಈ ಹಿಂದೆ ವಿದ್ಯುತ್ ಬಿಲ್ ಅನ್ನು ಸಮಯಕ್ಕೆ ಸರಿಯಾಗಿ ಪಾವತಿಸುತ್ತಾ ಬಂದಿದ್ದೇವೆ. ಯಾವ ತಿಂಗಳು ಕೂಡಾ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿಲ್ಲ. ಆದರೆ ಈ ತಿಂಗಳು 10 ಲಕ್ಷ ರೂ. ಬಿಲ್ ನೋಡಿ ಕಡೂರು ಮೆಸ್ಕಾಂ ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ. ಅವರು ಸರಿ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆದರೆ ಮೆಸ್ಕಾಂ ಸಿಬ್ಬಂದಿಗೆ ಹೇಳಿ 4 ದಿನವಾದರೂ ಈವರೆಗೂ ಯಾವುದೇ ಮಾಹಿತಿ ನೀಡಿಲ್ಲ ಎಂದು ಅಂಗಡಿ ಮಾಲೀಕ ಕಮಲ್ ಚಂದ್ ಡಾಗಾ ಹಾಗೂ ಮೊಹಿತ್ ಡಾಗಾ ಮೆಸ್ಕಾಂ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

500 ರೂ. ಬರುವ ಜಾಗದಲ್ಲಿ 15 ಸಾವಿರ ರೂ. ಬಂದಿದೆ. ಇದು ಸಾಫ್ಟ್‌ವೇರ್ ಪ್ರಾಬ್ಲಂ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮೆಸ್ಕಾಂ ಸಿಬ್ಬಂದಿ ತಿಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago