ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ: ಬದುಕಿಗೆ ಗ್ಯಾರಂಟಿ ಕೊಡಿ ಎಂದು ಕಾಂಗ್ರೆಸ್​ ಸರ್ಕಾರ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

By: Ommnews

Date:

Share post:

ಬೆಂಗಳೂರು: ರಾಜ್ಯ ಸರ್ಕಾರ ಐದು ಗ್ಯಾರೆಂಟಿಗಳನ್ನು ಒಂದೊಂದಾಗಿಯೇ ಜಾರಿ ಮಾಡುತ್ತಿದೆ. ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಸಾರಿಗೆ ಮಾಲಿಕರು ಮತ್ತು ಚಾಲಕರಿಗೆ ಭಾರಿ ಹೊಡೆತ ಬಿದ್ದಿದ್ದು, ನಾವು ನಷ್ಟದಲ್ಲಿವೆ ಎಂದು ಖಾಸಗಿ ಸಾರಿಗೆ ಒಕ್ಕೂಟ ಇಂದು (ಸೆ.11) ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿದೆ. ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿ ರಾಜ್ಯ ಕಾಂಗ್ರೆಸ್​ ಸರಕಾರದ ಗ್ಯಾರಂಟಿಗಳ ‘ಅಡ್ಡ ಪರಿಣಾಮ’ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ. ಬದುಕಿಗೆ ಗ್ಯಾರಂಟಿ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement
Advertisement

ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ವಾಗ್ದಾಳಿ ಮಾಡಿದರು.

ಈ ಬಂದ್​ನಿಂದ ಸರಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ ಎಂದರು.

ಸರಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್​​ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆ-ತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು ಎಂದು ಹೇಳಿದರು.

ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ. ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕರೆದು ಮಾತನಾಡಬೇಕು ಎಂದು ಒತ್ತಾಯಿಸಿದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section