
ಚಿಕ್ಕಮಗಳೂರು, ಸೆ.11: ಮೆಸ್ಕಾಂ ಅಧಿಕಾರಿಗಳ ಎಡವಟ್ಟಿಗೆ ಗ್ರಾಹಕರು ಕಂಗಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮೋಹಿತ್ ಎಂಬುವವರಿಗೆ ಪ್ರತಿ ತಿಂಗಳು 5 ಸಾವಿರದವರೆಗೆ ವಿದ್ಯುತ್ ಬಿಲ್ ಬರುತ್ತಿತ್ತು(Electricity Bill). ಆದರೆ ಈ ಬಾರಿಯ ಆಗಸ್ಟ್ ತಿಂಗಳ ಬಿಲ್ ಬರೋಬ್ಬರಿ 10 ಲಕ್ಷ ಬಂದಿದೆ. ವಿದ್ಯುತ್ ಬಿಲ್ ನೋಡಿ ಮೋಹಿತ್ ಶಾಕ್ ಆಗಿದ್ದು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಸದ್ಯ ಈ ಬಗ್ಗೆ ಮೆಸ್ಕಾಂ(Mescom) ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.ಆಗಸ್ಟ್ 1 ರಿಂದ ಸೆಪ್ಟೆಂಬರ್ 1ರವರೆಗೆ ಒಂದು ತಿಂಗಳ ಕರೆಂಟ್ ಬಿಲ್ 10 ಲಕ್ಷ ರೂಪಾಯಿ ಬಂದಿದ್ದು ಅಂಗಡಿ ಮಾಲೀಕ ಶಾಕ್ ಆಗಿದ್ದಾರೆ. ಕಡೂರು ಪಟ್ಟಣದ ಉಳುಕಿನಕಲ್ಲು ಸಮೀಪದ ಡಾಗಾ ಕಾಂಪ್ಲೆಕ್ಸ್ನಲ್ಲಿನ ಮೋಹಿತ್ ಏಜೆನ್ಸಿಗೆ ಆಗಸ್ಟ್ ತಿಂಗಳ ವಿದ್ಯುತ್ ಬಿಲ್ 10,26,054 ರೂಪಾಯಿ ಬಂದಿದೆ. ಪ್ರತಿ ತಿಂಗಳು ವಿದ್ಯುತ್ ಬಿಲ್ ಅಂದಾಜು 4,000 ಸಾವಿರದಿಂದ 4,500 ರೂಗಳು ಮಾತ್ರ ಬರುತ್ತಿತ್ತು. ಆಗಸ್ಟ್ ತಿಂಗಳ ಬಿಲ್ ಏಕಾಏಕಿ 10 ಲಕ್ಷ ಬಂದಿದೆ. ಬಿಲ್ ಅವಧಿ 1/8/2023 ರಿಂದ 1/9/23ರವರೆಗೆ ಎಂದು ನಮೂದಿಸಲಾಗಿದೆ.