ಕೊಲಂಬೊ: ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳೆಂದು ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಗುರುತಿಸಿಕೊಂಡಿವೆ. ಆದರೆ ಮೈದಾನದಾಚೆಗೆ ಉಭಯ ದೇಶಗಳ ಆಟಗಾರರ ನಡುವೆ ಉತ್ತಮ ಬಾಂಧವ್ಯ ಹಾಗೂ ಒಡನಾಟಗಳಿವೆ. ಮೈದಾನದೊಳಗೆ ಉಭಯ ದೇಶದ ಆಟಗಾರರು ಜಿದ್ದಿಗೆ ಬಿದ್ದವರಂತೆ ಸೆಣಸಾಟ ನಡೆಸುತ್ತಾರೆ. ಆದರೆ ಮೈದಾನದ ಹೊರಗೇ ಇದೇ ಆಟಗಾರರು ನಗುನಗುತ್ತಾ ಮಾತಾನಾಡುವುದನ್ನು ನಾವೆಲ್ಲರೂ ಈಗಾಗಲೇ ನೋಡಿದ್ದೇವೆ. ಇದೀಗ ಅಂತಹದ್ದೇ ಒಂದು ಘಟನೆ ಏಷ್ಯಾಕಪ್ ಟೂರ್ನಿಯು ನಡೆಯುತ್ತಿರುವ ಸಂದರ್ಭದಲ್ಲಿ ನಡೆದಿದೆ.
ಹೌದು, ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಭಾನುವಾರ ಭಾರತ ಹಾಗೂ ಪಾಕಿಸ್ತಾನ ತಂಡಗಳು ಇಲ್ಲಿನ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದ್ದವು. 24.1 ಓವರ್ ಅಂತ್ಯದ ವೇಳೆಗೆ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ. ಈ ಗ್ಯಾಪ್‌ನಲ್ಲಿ ಪಾಕಿಸ್ತಾನದ ಮಾರಕ ವೇಗಿ ಶಾಹೀನ್ ಅಫ್ರಿದಿ, ಇತ್ತೀಚೆಗಷ್ಟೇ ತಂದೆಯಾದ ಜಸ್ಪ್ರೀತ್ ಬುಮ್ರಾ ಅವರಿಗೆ ಒಂದು ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ. ಈ ಸೌಹಾರ್ಧದ ನಡೆ ಕ್ರಿಕೆಟ್ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಇತ್ತೀಚೆಗಷ್ಟೇ ಜಸ್ಪ್ರೀತ್ ಬುಮ್ರಾ ಅವರ ಪತ್ನಿ ಸಂಜನಾ ಗಣೇಶನ್ ಗಂಡು ಮಗುವಿಗೆ ಜನ್ಮನೀಡಿದ್ದರು. ಈ ಗಂಡು ಮಗುವಿಗೆ ಅಂಗದ್ ಬೂಮ್ರಾ ಎನ್ನುವ ಹೆಸರಿಡಲಾಗಿದೆ. ಇದೀಗ ಅಂಗದ್‌ಗೆ ಪಾಕ್ ಎಡಗೈ ವೇಗಿ ಶಾಹೀನ್ ಅಫ್ರಿದಿ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ. ಇದಾದ ಬಳಿಕ ಇಬ್ಬರೂ ಒಬ್ಬರನ್ನೊಬ್ಬರು ಅಪ್ಪಿಕೊಂಡು ಶುಭ ಹಾರೈಸಿದ್ದಾರೆ.
ಈ ಕುರಿತಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಸಂತೋಷವನ್ನು ಹಂಚಿಕೊಳ್ಳೋಣ. ತಂದೆಯಾದ ಬೂಮ್ರಾಗೆ ಶಾಹಿನ್ ಆಫ್ರೀದಿಯಿಂದ ನಗುವಿನ ಸಂದೇಶ ಎಂದು ಬರೆದುಕೊಂಡಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…