ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದ ಸೆ.15ರ ನಂತರ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ಕರಾವಳಿ ಭಾಗದಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುತ್ತಿದೆ. ರಾಜ್ಯದ ಒಳನಾಡಿನಲ್ಲೂ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆದಿದೆ.
ಕರಾವಳಿಯಲ್ಲಿ ಇನ್ನೂ ಮೂರು ದಿನ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಹಾಗೂ ಒಡಿಸ್ಸಾ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಚದುರಿದಂತೆ ಮಳೆಯಾಗಲಿದೆ. ಸೆ. 15ರ ನಂತರ ಮುಂಗಾರು ಮಳೆ ಚುರುಕಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಆಗಸ್ಟ್ ನಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಸೆಪ್ಟೆಂಬರ್‍ನಲ್ಲಿ ಚೇತರಿಸಿಕೊಂಡಿದೆ. ಇದುವರೆಗೂ ಹೆಚ್ಚು ಕಡಿಮೆ ವಾಡಿಕೆ ಪ್ರಮಾಣದ ಮಳೆಯಾಗಿದೆ. ಸೆಪ್ಟೆಂಬರ್ ಒಂದರಿಂದ ನಿನ್ನೆಯವರೆಗೆ ರಾಜ್ಯದಲ್ಲಿ 58 ಮಿ.ಮೀ.ನಷ್ಟು ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಈ ಅವಧಿಯಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 47 ಮಿ.ಮೀ.ನಷ್ಟಿದ್ದು. 58 ಮಿ.ಮೀ.ನಷ್ಟು ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.24ರಷ್ಟು ಹೆಚ್ಚು ಮಳೆಯಾದಂತಾಗಿದೆ.
ದಕ್ಷಿಣ ಒಳನಾಡಿನಲ್ಲಿ 56 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.76ರಷ್ಟು ಹೆಚ್ಚು ಮಳೆಯಾಗಿದೆ. ಇದೇ ರೀತಿ ಉತ್ತರ ಒಳನಾಡಿನಲ್ಲೂ 56 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.57ರಷ್ಟು ಹೆಚ್ಚು ಮಳೆಯಾಗಿದೆ. ಆದರೆ, ಮಲೆನಾಡಿನಲ್ಲಿ ಶೇ.21ರಷ್ಟು ಹಾಗೂ ಕರಾವಳಿಯಲ್ಲಿ ಶೇ.28ರಷ್ಟು ಮಳೆ ಕೊರತೆ ಉಂಟಾಗಿದೆ.
ಮುಂಗಾರು ಹಂಗಾಮಿನ ಜೂನ್ ಒಂದರಿಂದ ನಿನ್ನೆಯವರೆಗೆ ರಾಜ್ಯದ ವಾಡಿಕೆ ಮಳೆ ಪ್ರಮಾಣ 737 ಮಿ.ಮೀ. ಆಗಿದ್ದು, ಕೇವಲ555 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ವಾಡಿಕೆಗಿಂತ ಶೇ.25ರಷ್ಟು ಮಳೆ ಕಡಿಮೆಯಾಗಿದೆ. ಈ ಅವಧಿಯಲ್ಲಿ ಬಹುತೇಕ ರಾಜ್ಯದ ಎಲ್ಲಾ ಭಾಗಗಳಲ್ಲಿ ಮಳೆ ಕೊರತೆ ಉಂಟಾಗಿದೆ.
ರಾಜ್ಯದಲ್ಲಿ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಕಾವೇರಿ,ಕೃಷ್ಣಾ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಆಶಾದಾಯಕವಾಗಿಲ್ಲ. ಮಳೆಯ ಕಣ್ಣಾಮುಚ್ಚಾಲೆ ಆಟದಿಂದ ಬರಪರಿಸ್ಥಿತಿ ಹಲವು ತಾಲ್ಲೂಕುಗಳಲ್ಲಿ ಉಂಟಾಗಿದ್ದು, ರೈತರು ಬೆಳೆ ಬೆಳೆಯಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…