ರಾಜ್ಯ

ಸಿದ್ಧರಾಮಯ್ಯ ಮನೆಗೆ ಮಾರಿ ಪರರಿಗೆ ಉಪಕಾರಿ: ಹರಿಪ್ರಸಾದ್​ಗೆ ಈಶ್ವರಾನಂದಪುರಿ ಶ್ರೀ ತಿರುಗೇಟು

ಚಿತ್ರದುರ್ಗ: ಸಿದ್ದರಾಮಯ್ಯ ಅವರ ಹೆಸರೆತ್ತದೇ ಪರೋಕ್ಷವಾಗಿಯೇ ಅವರ ವಿರುದ್ಧ ಕಾಂಗ್ರೆಸ್ ಹಿರಿಯ ಬಿ.ಕೆ.ಹರಿಪ್ರಸಾದ್ ಬಹಿರಂಗ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್​ನಲ್ಲಿ ಹಲ್​ಚಲ್​ ಸೃಷ್ಟಿಸಿದೆ. ಹರಿಪ್ರಸಾದ್ ಅವರ ಹೇಳಿಕೆಗಳು ಸಿದ್ದರಾಮಯ್ಯನವರ ಆಪ್ತರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಇದೇ ವಿಚಾರವಾಗಿ ಕಾಗಿನೆಲೆ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಹರಿಪ್ರಸಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement

ಚಿತ್ರದುರ್ಗದ ನಾಗೇನಹಳ್ಳಿಯಲ್ಲಿ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಈಶ್ವರಾನಂದಪುರಿ ಶ್ರೀ, ದೊಡ್ಡ ನಾಯಕನಿಗೆ ಇಷ್ಟೊಂದು ಹೊಟ್ಟೆಕಿಚ್ಚು ಇರಬಾರದು. ಸಿದ್ಧರಾಮಯ್ಯ ಕುರುಬರನ್ನೇ ಬೆಳೆಸಿದ್ದಾರೆ ಎಂದಿದ್ದಾರೆ ಹರಿಪ್ರಸಾದ್ ಪ್ರಬುದ್ಧ ರಾಜಕಾರಣಿ ಹಾಗೇ ಮಾತಾಡಬಾರದಿತ್ತು. ಸಿದ್ಧರಾಮಯ್ಯ ಸಂಪುಟದಲ್ಲಿ ಬಹಳ ಜನ ಕುರುಬರು ಮಂತ್ರಿಗಳಾಗಿರಲಿಲ್ಲ. ಸಿಎಂ ಸಿದ್ಧರಾಮಯ್ಯ ಜಾತಿ ರಾಜಕಾರಣ ಮಾಡಲಿಲ್ಲ. ಸಣ್ಣ ಸಮುದಾಯಗಳಿಗೂ ಸಿದ್ಧರಾಮಯ್ಯ ಅವಕಾಶ ನೀಡಿದರು. ಬಡವರು, ಹಿಂದುಳಿದವರು, ದಲಿತರು, ಮಹಿಳೆಯರ ಪರ‌ ಧ್ವನಿ ಆದರು. ಹರಿಪ್ರಸಾದ್ ಜನರಿಗೆ ತಪ್ಪು ಸಂದೇಶ ರವಾನಿಸಿದ್ದು, ಈ ಬಗ್ಗೆ ನಾವು ಮಾತಾಡದಿದ್ದರೆ ಜನರಿಗೆ ಸತ್ಯ ಗೊತ್ತಾಗುವುದಿಲ್ಲ. ಸಿದ್ಧರಾಮಯ್ಯ ಮನೆಗೆ ಮಾರಿ ಪರರಿಗೆ ಉಪಕಾರಿ ಎಂದು ಹರಿಪ್ರಸಾದ್​ಗೆ ತಿರುಗೇಟು ನೀಡಿದರು.

ಹರಿಪ್ರಸಾದ್ ನಿವೇನೂ ಸಾಧನೆ ಮಾಡಲು ಆಗುವುದಿಲ್ಲ. ಸಿದ್ಧರಾಮಯ್ಯ ಕೋಟ್ಯಂತರ ಜನರ ಮನಸ್ಸಿನಲ್ಲಿದ್ದಾರೆ. ಒಕ್ಕಲಿಗ, ಲಿಂಗಾಯತರು ಸಿಎಂ ಆದಾಗಿನ ಸಂಪುಟ ನೋಡಿ. ಆಯಾ ಸಮುದಾಯಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡಿದ್ದರು. ಸಿದ್ಧರಾಮಯ್ಯ ಎಲ್ಲಾ ಸಮುದಾಯಗಳಿಗೂ ಸ್ಥಾನ ನೀಡಿದ್ದಾರೆ ಎಂದರು.

ಸಿದ್ಧರಾಮಯ್ಯ ಅಧಿಕಾರಕ್ಕಾಗಿ ಅಲ್ಲ ಜನರಿಗಾಗಿ ರಾಜಕಾರಣ ಮಾಡುತ್ತಾರೆ. ಹಿಂದುಳಿದ ಸಮುದಾಯದ ಜನ ಜಾಗೃತರಾಗಬೇಕು. ಹಿಂದುಳಿದ ಸಮಾಜದ ಜನ ಉಪಕಾರ ಸ್ಮರಣೆ ಮಾಡಲ್ಲ, ಮರೆಯುತ್ತಾರೆ. ಅಧಿಕಾರ‌ ಹಂಚಿಕೊಳ್ಳಲು ಎಲ್ಲರೂ ಬರುತ್ತಾರೆ. ಅಧಿಕಾರ‌ ಕೊಟ್ಟವನನ್ನು ಮುಂದುವರೆಸಲು ಪ್ರಯತ್ನಿಸಲ್ಲ. ಇದು ಹಿಂದುಳಿದ ಸಮಾಜದಲ್ಲಿರುವ ಒಂದು ದೋಷ. ಎಲ್ಲಾ ಸಮುದಾಯಗಳು ಮುಂದೆ ಬರಲಿ, ಅವಕಾಶ ಸಿಗಲಿ ಎಂದು ಹೇಳಿದರು.

ಸಿದ್ಧರಾಮಯ್ಯ 2ನೇ ಸಲ ಸಿಎಂ ಆಗಿದ್ದಾರೆ. ಹೈಕಮಾಂಡ್ ಹಾಗೂ 135 ಜನ ಶಾಸಕರು ಸೇರಿ ಅವರನ್ನು ಸಿಎಂ ಮಾಡಿದ್ದಾರೆ. ನಿಮ್ಮನ್ನೇಕೆ ಸಿಎಂ ಮಾಡಲಿಲ್ಲ ಎಂದು ಹರಿಪ್ರಸಾದ್​ಗೆ ಪ್ರಶ್ನಿಸಿದ ಸ್ವಾಮೀಜಿ, ಸಿದ್ಧರಾಮಯ್ಯ ಮುಖ ನೋಡಿ ರಾಜ್ಯದ ಜನ ಮತ ಹಾಕಿದ್ದಾರೆ. ನಿಮ್ಮನ್ನು ನೋಡಿ ಯಾರೂ ಮತ ಹಾಕಿಲ್ಲ ಎಂದು ಕಿಡಿಕಾರಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago