ಬೆಂಗಳೂರು: ಬೆಂಗಳೂರಿನ ಸ್ಯಾಟ್ಲೈಟ್ ಸಮೀಪದ ಭಾರತ್ ಪೆಟ್ರೋಲ್ ಬಂಕ್ ಬಳಿ ತಮಿಳುನಾಡು ಸಾರಿಗೆ ಬಸ್ಗಳ ಮೇಲೆ ಕಲ್ಲು ತೂರಾಟವಾಗಿದೆ. ಸೆ.11ರ ಮಧ್ಯರಾತ್ರಿ ತಮಿಳುನಾಡಿಗೆ ಸೇರಿದ 4 ಬಸ್ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬಸ್ ಚಾಲಕ ಗುಣಶೇಖರನ್ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಾಮರಾಜಪೇಟೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.11ರಂದು ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ಗೆ ಕರೆ ನೀಡಿತ್ತು. ಪ್ರತಿಭಟನಾಕಾರರು ರೋಡಿಗಿಳಿದ ಕೆಲ ವಾಹನಗಳ ಮೇಲೆ ಕಲ್ಲು, ಮೊಟ್ಟೆ ತೂರಾಟ ಮಾಡಿ ಆಕ್ರೋಶ ಹೊರ ಹಾಕಿದ್ದರು. ಮಧ್ಯಾಹ್ನ ಸಾರಿಗೆ ಸಚುವ ರಾಮಲಿಂಗಾರೆಡ್ಡಿ ಫ್ರೀಡಂ ಪಾರ್ಕ್ಗೆ ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಮಾತನಾಡಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು. ಇದರ ನಡುವೆ ತಡರಾತ್ರಿ ತಮಿಳುನಾಡು ಬಸ್ಗಳ ಮೇಲೆ ಕಲ್ಲು ತೂರಾಟವಾಗಿದೆ.