ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದ್ದಾರೆ. ಕೋರ್ಟ್ನಿಂದ ನಿನ್ನೆ ಸರ್ಚ್ ವಾರಂಟ್ ಪಡೆದುಕೊಂಡು ಇಂದು ಬೆಳ್ಳಂಬೆಳಗ್ಗೆ ಪ್ರಮುಖ ಆರೋಪಿಗಳಾದ ಶ್ರೀಕಿ, ಸುನೀಶ್ ಹೆಗ್ಡೆ, ಪ್ರಸಿದ್ದ್ ಮನೆಗಳ ಮೇಲೆ ಎಸ್ಐಟಿ ಅಧಿಕಾರಿಗಳು ಮಾಡಿದ್ದಾರೆ. ಸದಾಶಿವನಗರದಲ್ಲಿರುವ ಸುನೀಶ್ ಹೆಗ್ಡೆ, ಪ್ರಸಿದ್ದ್ ಹಾಗೂ ಜಯನಗರದಲ್ಲಿರುವ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೇಳಿಬಂದ ಬಿಟ್ ಕಾಯಿನ್ ಹಗರಣ ಮತ್ತೆ ಸದ್ದು ಮಾಡುತ್ತಿದ್ದು, ಸಿಸಿಬಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ದಾಖಲಿಸಿದ ಬಳಿಕ ರಾಜ್ಯ ಸರ್ಕಾರ ಮರು ತನಿಖೆಗೆ ಆದೇಶಸಿದ್ದು, ಹಿರಿಯ ಐಪಿಎಸ್ ಅಧಿಕಾರಿ ಮನೀಷ್ ಕರ್ಬಿಕರ್ ನೇತೃತ್ವದಲ್ಲಿ SIT ತಂಡ ರಚಿಸಿದೆ. ಆದರೆ ಇದರ ಮರು ತನಿಖೆ ಅಂದುಕೊಂಡಷ್ಟು ಸುಲಭವಲ್ಲ. ಇಸ್ರೇಲ್ ದೇಶದ ಸಹಾಯ ಪಡೆಯಲು ಹಂತ-ಹಂತ ಪ್ರಕ್ರಿಯೆ ಪಾಲಿಸಬೇಕಿದೆ. ಅಲ್ಲದೇ ಕ್ರಿಪ್ಟೋ ಕರೆನ್ಸಿ ವಾಲೇಟ್ಗಳನ್ನ ಫ್ರೀಜ್ ಮಾಡುವಷ್ಟು ಟೆಕ್ನಾಲಜಿ ನಮ್ಮಲ್ಲಿ ಇನ್ನೂ ಅಷ್ಟಾಗಿ ಬೆಳೆದಿಲ್ಲ. ಹೀಗಾಗಿ ಬಿಟ್ ಕಾಯಿನ್ ಹಗರಣದ ಮರು ತನಿಖೆ ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ರಾಜ್ಯ ಸಿಐಡಿ SIT ತಂಡ ಇದಕ್ಕಾಗಿ ಇಸ್ರೇಲ್ ಬಳಿ ಸಹಾಯ ಕೇಳುವ ಸಾಧ್ಯತೆ ಇದ್ದು, ಅದರಕ್ಕೂ ಮೊದಲು ಪ್ರಾಥಮಿಕವಾಗಿ ಪ್ರಮುಖ ಆರೋಪಿಗಳ ಜನ್ಮಜಾಲಾಡುತ್ತಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರುಗಳ ಹೆಸರುಗಳು ಕೇಳಿಬಂದಿದ್ದವು. ಇದರಿಂದ ಈ ಬಿಟ್ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ಯು. ಇದೀಗ ಎಸ್ಐಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ತನಿಖೆಯಲ್ಲಿ ಏನೆಲ್ಲ ಅಂಶಗಳು ಬೆಳಕಿಗೆ ಬರಲಿವೆ ಎನ್ನುವುದುನ್ನು ಕಾದುನೋಡಬೇಕಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…