ರಾಜ್ಯ

ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆ ಸ್ಥಗಿತಗೊಳಿಸಿರುವ ಅರಣ್ಯಾಧಿಕಾರಿಗಳು; ಭೀಮನ ನರಳಾಟ!

ಹಾಸನ: ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ. ತೀವ್ರ ನೋವಿನಿಂದ ನಡೆಯಲು ಸಾಧ್ಯವಾಗದೆ, ಆಲೂರಿನ ಕಾಫಿ ಎಸ್ಟೇಟ್‌ನಲ್ಲಿ ಒಂದೆರಡು ದಿನಗಳಿಂದ ಒಂದೇ ಸ್ಥಳದಲ್ಲಿ ಆನೆ ನಿಂತಿರುವುದು ಕಂಡುಬಂದಿದೆ. ಭೀಮ ಆನೆಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುವ ವೇಳೆ, ಶಾರ್ಪ್ ಶೂಟರ್ ವೆಂಕಟೇಶ್ ಸಾವಿಗೀಡಾಗಿದ್ದರು. ಆಗಸ್ಟ್ 31ರಂದು ಘಟನೆ ನಡೆದಿದ್ದು, ಅಂದಿನಿಂದ ಗಾಯಗೊಂಡ ಆನೆ ಚಿಕಿತ್ಸೆಗಾಗಿ ಕಾಯುತ್ತಲೇ ಇದೆ.

Advertisement
Advertisement
Advertisement

ಈಮಧ್ಯೆ, ಘಟನೆ ನಂತರ ಅರಣ್ಯ ಇಲಾಖೆಯು ಆನೆಗೆ ಚಿಕಿತ್ಸೆ ನೀಡುವ ಕಾರ್ಯಾಚರಣೆಯನ್ನು ನಿಲ್ಲಿಸಿದೆ ಎನ್ನಲಾಗಿದೆ. ಇದೀಗ ಸ್ಥಳೀಯರು ಗಾಯಗೊಂಡಿರುವ ಆನೆಗೆ ಚಿಕಿತ್ಸೆ ನೀಡುವಂತೆ ಇಲಾಖೆಯನ್ನು ಒತ್ತಾಯಿಸುತ್ತಿದ್ದು, ಅದರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಡಿಸಿಎಫ್ ಮೋಹನ್ ಕುಮಾರ್ ಪ್ರಕಾರ, ಆನೆಗೆ ಚಿಕಿತ್ಸೆ ನೀಡಲು ಇಲಾಖೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಯೋಜಿಸಿದೆ ಎಂದಿದ್ದಾರೆ. 

ಆಲೂರು ತಾಲೂಕಿನ ಮಗ್ಗೆ ರಾಯರಕೊಪ್ಪಲು ಹಾಗೂ ಸಕಲೇಶಪುರದ ಹೆತ್ತೂರು ಭಾಗಗಳಲ್ಲಿ ಆನೆಗಳು ನಿರಂತರವಾಗಿ ಬೆಳೆದು ನಿಂತಿರುವ ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago