ರಾಜ್ಯ

Bengaluru traffic ತಗ್ಗಿಸಲು ಶಾಲೆ, ವಾಣಿಜ್ಯ ಕಂಪನಿಗಳ ಸಮಯ ಬದಲಿಸಬಹುದೇ? ಸರ್ಕಾರಕ್ಕೆ ಹೈಕೋರ್ಟ್ ಸಲಹೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಟ್ರಾಪಿಕ್‌ ಸಮಸ್ಯೆ ಉಂಟಾಗುತ್ತಿದೆ. ಈ ಟ್ರಾಫಿಕ್‌ ದಟ್ಟಣೆ ತಗ್ಗಿಸಲು ಶಾಲಾ ಸಮಯ, ವಾಣಿಜ್ಯ ಕೆಲಸದ ಸಮಯವನ್ನು ಬದಲಾವಣೆ ಮಾಡುವ ಬಗ್ಗೆ ಮರು ಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.

Advertisement
Advertisement
Advertisement

ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರವು ಮಧ್ಯಸ್ಥಗಾರರ ಸಭೆಯನ್ನು ಕರೆಯಲು ಮತ್ತು ಕೈಗಾರಿಕಾ ಘಟಕಗಳು, ಕಾರ್ಖಾನೆಗಳು, ವಾಣಿಜ್ಯ ಮನೆಗಳು ಮತ್ತು ಕಂಪನಿಗಳ ಶಾಲಾ ಸಮಯ ಮತ್ತು ಕೆಲಸದ ಸಮಯವನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಸರ್ಕಾರೇತರ ಸಂಸ್ಥೆಯಾದ (ಎನ್‌ಜಿಒ) ಸಮರ್ಪಣ ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗೀಯ ಪೀಠವು ಹೀಗೆ ಹೇಳಿದೆ.

ಜೊತೆಗೆ, ಕಾರ್ಮಿಕ ಕಾರ್ಯದರ್ಶಿಯು ಕೈಗಾರಿಕೆಗಳು, ಕಾರ್ಖಾನೆಗಳು ಅಥವಾ ಅಲೈಡ್ ಯೂನಿಟ್‌ಗಳು, ಕೈಗಾರಿಕಾ ಸಂಸ್ಥೆ, ಚೇಂಬರ್ ಆಫ್ ಕಾಮರ್ಸ್‌ನ ಪ್ರತಿನಿಧಿಗಳಂತಹ ಮಧ್ಯಸ್ಥಗಾರರ ಸಭೆಯನ್ನು ಕರೆಯಬಹುದು. ಇವುಗಳ ಕೆಲಸದ ಸಮಯವನ್ನು ಮರುಪರಿಶೀಲಿಸುವ ಬಗ್ಗೆ ಚರ್ಚಿಸಬಹುದು. ಕೈಗಾರಿಕಾ ಘಟಕಗಳು, ಕಾರ್ಖಾನೆಗಳು, ವಾಣಿಜ್ಯ ಮನೆಗಳು, ಕಂಪನಿಗಳು ಇತ್ಯಾದಿಗಳೊಂದಿಗೂ ಈ ಬಗ್ಗೆ ಚರ್ಚೆ ಮಾಡಬಹುದು. ಈ ಮೂಲಕ ಪೀಕ್‌ ಅವರ್‌ಗಳಲ್ಲಿ ಸಂಚಾರ ದಟ್ಟಣೆಯನ್ನು ತಗ್ಗಿಸುವುದಕ್ಕೆ ಅನುಕೂಲ ಆಗಲಿದೆ. ಈ ಪೀಕ್‌ ಅವರ್‌ನಲ್ಲಿ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಹೊರೆಯನ್ನು ಕಡಿಮೆ ಮಾಡಲು ಮಧ್ಯಸ್ಥಗಾರರು ಕೆಲಸದ ಸಮಯದ ಆಚೀಚೆ ಮಾಡಿಕೊಳ್ಳಬಹುದೇ ಎಂಬುದರ ಸಲಹೆಯನ್ನು ಕೂಡ ನೀಡಬಹುದು ಎಂದು ಪೀಠ ಸ್ಪಷ್ಟಪಡಿಸಿದೆ.

ಸಾದಹಳ್ಳಿ ಗೇಟ್‌ನಿಂದ ಹೆಬ್ಬಾಳ ಮೇಲ್ಸೇತುವೆ ನಡುವೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಭಾರಿ ವಾಹನಗಳ ಪ್ರವೇಶ ನಿಷೇಧಿಸಿ 2014ರಲ್ಲಿ ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಅಧಿಸೂಚನೆಯನ್ನು ಉಲ್ಲೇಖಿಸಿದ ನ್ಯಾಯಾಲಯ, “ಬೆಳಗ್ಗೆಯಿಂದ ರಾತ್ರಿವರೆಗೆ ಮಾತ್ರ ಭಾರಿ ವಾಹನಗಳನ್ನು ನಿಷೇಧಿಸದೇ ಇದನ್ನು ಪೂರ್ಣಕಾಲಿಕವಾಗಿ ನಿಷೇಧಿಸಿದಾಗಲೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಾಗಬಹುದು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಇನ್ನು ಮೆಟ್ರೊ ರೈಲು ಮಾರ್ಗದ ಯೋಜನಾ ವರದಿಯನ್ನು ಸಿದ್ಧಪಡಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿದೆ. ಕಾಲಮಿತಿಯನ್ನು ವಿಸ್ತರಿಸಿ ಅಂದರೆ 2023-2024 ನೇ ವರ್ಷಕ್ಕೆ ಯೋಜನಾ ವರದಿಯನ್ನು ಸಿದ್ಧಪಡಿಸಬೇಕು. ಜೊತೆಗೆ ಯೋಜನಾ ವರದಿಯನ್ನು ಸಿದ್ಧಪಡಿಸುವ ಕಾರ್ಯವು ಕೂಡ ತ್ವರಿತಗೊಳಿಸಬೇಕು ಎಂದು ಪೀಠವು ಸೂಚಿಸಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago