ಕರ್ನಾಟಕ ಅಂಚೆ ಇಲಾಖೆ ನೇಮಕಾತಿ! ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

By: Ommnews

Date:

Share post:

ಭಾರತೀಯ ಅಂಚೆ ಇಲಾಖೆ(India Postal Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 28 ಸ್ಟಾಫ್ ಕಾರ್​ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು.

Advertisement
Advertisement
Advertisement

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಚಿಕ್ಕೋಡಿ -1, ಕಲಬುರ್ಗಿ -1, ಗದಗ -1, ಕಾರವಾರ -1,ಮಂಡ್ಯ-1, ಉಡುಪಿ -1,ಕೋಲಾರ -1, ಮೈಸೂರು -3, ಬೆಂಗಳೂರು -15 ಹುದ್ದೆಗಳು ಖಾಲಿ ಇವೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 15, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.

ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಸೆಪ್ಟೆಂಬರ್ 2023.

ಅರ್ಜಿ ಸಲ್ಲಿಸುವ ವಿಳಾಸ:

ಮ್ಯಾನೇಜರ್, ಮೇಲ್ ಮೋಟಾರ್ ಸೇವೆ, ಬೆಂಗಳೂರು-560001

(ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ ಅರ್ಜಿ ಸಲ್ಲಿಸಬಹುದು)

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section