ರಾಜ್ಯ

ಕಾವೇರಿ ವಿವಾದ; ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಸೆ.13 ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 12:30 ಕ್ಕೆ ವಿಶೇಷ ಸಭೆ ಕರೆಯಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಭಾವಹಿಸಲಿದ್ದಾರೆ.

Advertisement
Advertisement
Advertisement

ಕರ್ನಾಟಕದಲ್ಲಿ ಕಾವೇರಿ ಕಿಚ್ಚು ಹೆಚ್ಚಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮತ್ತೆ 15 ದಿವಸ 5000 ಕ್ಯೂಸೆಕ್ ನೀರು ಬಿಡಬೇಕೆಂದು ಮಂಗಳವಾರ ರಾಜ್ಯಕ್ಕೆ ಆದೇಶಿಸಿದೆ. ಇದರಿಂದ ಕಾವೇರಿ ತೀರದ ರೈತರಿಗೆ ಬರಸಿಡಲು ಬಡಿದಂತಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಸರ್ಕಾರದ ವಿರುದ್ಧ ಇನ್ನಷ್ಟು ಆಕ್ರೋಶಗೊಂಡಿದ್ದು, ರಸ್ತೆಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಕೃಪೆ ಇಲ್ಲದೇ ಭೂಮಿ ಬರಡಾಗುತ್ತಿದೆ. ಬರಗಾಲ ಆವರಿಸಿದ್ದು, ಪ್ರತಿಪಕ್ಷಗಳು ಬರಗಾಲ ಪೀಡಿತ ತಾಲೂಕುಗಳ ಹೆಸರು ಘೋಷಣೆ ಮಾಡುವಂತೆ ಪಟ್ಟು ಹಿಡಿದಿವೆ. ಇನ್ನ ಸಚಿವ ಡಿ. ಸುಧಾಕರ್​ ವಿರುದ್ಧ ಭೂಕಬಳಿಕೆ, ಜಾತಿ ನಿಂದನೆ ಆರೋಪದ ಅಡಿ ಪ್ರಕರಣ ದಾಖಲಾಗಿದ್ದು, ಕೂಡಲೆ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಪ್ರತಿಪಕ್ಷಗಳು ಆಗ್ರಹಿಸಿವೆ. 

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago