ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಮುಂದಿನ 5 ದಿನ ಮಳೆ

By: Ommnews

Date:

Share post:

ಕರ್ನಾಟಕದ ಕರಾವಳಿ ಹಾಗೂ ಕೆಲವೆಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು,ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Advertisement
Advertisement
Advertisement

ಮಾಣಿ, ಮಂಗಳೂರು, ಧರ್ಮಸ್ಥಳ, ಸುಳ್ಯ, ಉಡುಪಿ, ಸಿದ್ದಾಪುರ, ಹೊನ್ನಾವರ, ವಿಜಯಪುರ, ತಾಳಿಕೋಟೆ, ಖಜೂರಿ, ಶೋರಾಪುರ, ಸೈದಾಪುರ, ಮಂಗಳೂರು ವಿಮಾನ ನಿಲ್ದಾಣ, ಕೋಟ, ಕೊಲ್ಲೂರು, ಶಿರಾಲಿ, ಗೇರುಸೊಪ್ಪ, ಯಲ್ಲಾಪುರ, ಕ್ಯಾಸಲ್​ರಾಕ್, ಚಿಂಚೋಳಿ, ಮಹಾಗಾಂವ್, ಕವಡಿಮಟ್ಟಿ, ಎಆರ್​ಜಿ, ರಾಯಚೂರು, ಗಬ್ಬೂರು, ಮಂಡಗದ್ದೆ, ಶೃಂಗೇರಿ, ಕೊಟ್ಟಿಗೆಹಾರ, ಪಣಂಬೂರು, ಮುಲ್ಕಿ, ಪುತ್ತೂರು, ಉಪ್ಪಿನಂಗಡಿ, ಮಂಕಿ, ಕುಮಟಾ, ಕಿರವತ್ತಿ, ಮಂಚಿಕೇರಿ, ಜೋಯಿಡಾ, ಮುಂಡಗೋಡ, ಅಣ್ಣಿಗೇರಿ, ಕಮಲಾಪುರ, ಕೆಂಭಾವಿ, ಜಯಪುರ, ಬಾಳೆಹೊನ್ನೂರು, ಆನೇಕಲ್, ದಾವಣಗೆರೆ, ಕುಣಿಗಲ್​, ರಾಮನಗರದಲ್ಲಿ ಮಳೆಯಾಗಿದೆ.

ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತಯ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ ಮತ್ತು ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section