ಉಡುಪಿ: ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದಲ್ಲಿ ಚೈತ್ರಾ ಸಿಕ್ಕಿಬಿದ್ದಿದ್ದಾಳೆ. ಇನ್ನು ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದಳು ಎನ್ನುವ ಮಾಹಿತಿ ತಿಳಿದುಬಂದಿದೆ. ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ.
ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಈ ಕುರಿತು ಉದ್ಯಮಿ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಚೈತ್ರಾಗೆ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂ ಎನ್ನುವರ ನಿವಾಸದಲ್ಲಿ ಅವಿತುಕೊಂಡಿದ್ದರು ಎಂದು ತಿಳಿದುಬಂದಿದ್ದು, ಇದೀಗ ಚೈತ್ರಾಗೆ ಆಶ್ರಯ ನೀಡಿದ್ದ ಅಂಜುಂಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದರಿಂದ ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಂಕಷ್ಟ ಎದುರಾಗಿದೆ.
ಇನ್ನು ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳನ್ನು ಉಡುಪಿಯಿಂದ ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದು, ಇಂದು (ಸೆಪ್ಟೆಂಬರ್ 13) ಸಂಜೆ ವೇಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಅಲ್ಲದೇ ಇನ್ನಷ್ಟು ತನಿಖೆ ಮಾಡಬೇಕಿರುವುದರಿಂದ ತಮ್ಮ ವಶಕ್ಕೆ ಕೇಳುವ ಸಾಧ್ಯತೆಗಳು ಹೆಚ್ಚಿವೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…