ಮನೋರಂಜನೆ

ಒಳ್ಳೆಯ ಸಮಯ ಈಗ ಶುರುವಾಗಿದೆ’; ‘ಜವಾನ್’ ಯಶಸ್ಸಿನ ಬಗ್ಗೆ ನಯನತಾರಾ ಮಾತು

ನಟಿ ನಯನತಾರಾ ಬಾಳಲ್ಲಿ ಎಲ್ಲವೂ ಒಳ್ಳೆಯದಾಗುತ್ತಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ವಿಘ್ನೇಶ್ ಶಿವನ್ ಅವರನ್ನು ನಯನತಾರಾ ಕಳೆದ ವರ್ಷ ಮದುವೆ ಆದರು. ಬಾಡಿಗೆ ತಾಯ್ತನದ ಮೂಲಕ ಅವರು ಅವಳಿ ಮಕ್ಕಳನ್ನು ಪಡೆದರು. ಮಕ್ಕಳ ಆರೈಕೆ ಜೊತೆಗೆ ಚಿತ್ರರಂಗದಲ್ಲೂ ತೊಡಗಿಕೊಂಡಿದ್ದಾರೆ. ಈಗ ನಯನತಾರಾ ನಟನೆಯ ‘ಜವಾನ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಬೆನ್ನಲ್ಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಪೋಸ್ಟ್ ಒಂದನ್ನು ಹಾಕಿದ್ದು ಎಲ್ಲರ ಗಮನ ಸೆಳೆಯುತ್ತಿದೆ.

Advertisement
Advertisement
Advertisement

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿರೋದು ತಮಿಳು ನಿರ್ದೇಶಕ ಅಟ್ಲಿ. ಈ ಕಾರಣಕ್ಕೆ ಅಟ್ಲಿ ನಾಯಕಿ ಸ್ಥಾನಕ್ಕೆ ತಮಿಳು ನಟಿ ನಯನತಾರಾ ಅವರನ್ನು ಆಯ್ಕೆ ಮಾಡಿಕೊಂಡರು. ಅವರು ಈ ಚಿತ್ರದಲ್ಲಿ ಆ್ಯಕ್ಷನ್ ಮೆರೆದಿದ್ದಾರೆ. ನಯನತಾರಾ ನಟನೆ ಅನೇಕರಿಗೆ ಇಷ್ಟವಾಗಿದೆ. ಈ ಗೆಲುವಿನ ಬೆನ್ನಲ್ಲೇ ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಸ್ಟೇಟಸ್ ಒಂದನ್ನು ಹಂಚಿಕೊಂಡಿದ್ದಾರೆ. ‘ಒಳ್ಳೆಯ ಸಮಯ ಈಗ ಶುರುವಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ನಯನತಾರಾ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇದರ ಜೊತೆಗೆ ಸಾಕಷ್ಟು ವಿವಾದಗಳನ್ನು ಕೂಡ ಮಾಡಿಕೊಂಡಿದ್ದಾರೆ. ಅವರ ಸಿನಿಮಾಗಳು ಸೋತಾಗ ಅನೇಕರು ಟೀಕೆ ಮಾಡಿದ್ದೂ ಇದೆ. ಈಗ ‘ಜವಾನ್’ ಸಿನಿಮಾದಿಂದ ಅವರಿಗೆ ಬೇಡಿಕೆ ಹೆಚ್ಚಿದೆ. ಈ ಕಾರಣದಿಂದಲೇ ನಯನತಾರಾ ಈ ರೀತಿಯ ಪೋಸ್ಟ್​ ಹಾಕಿದ್ದಾರೆ ಎನ್ನಲಾಗುತ್ತಿದೆ.

ನಯನತಾರಾ ಅವರು ಪ್ರತಿ ಸಿನಿಮಾಗೆ 8-10 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದರು. ‘ಜವಾನ್’ ಚಿತ್ರಕ್ಕಾಗಿ ಅವರು 11 ಕೋಟಿ ರೂಪಾಯಿ ಪಡೆದಿದ್ದರು. ಈ ಸಿನಿಮಾ ಯಶಸ್ಸಿನ ಬಳಿಕ ಅವರು ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದು ನಿರ್ಮಾಪಕರಿಗೆ ಹೊರೆ ಆಗಲಿದೆ. ದೊಡ್ಡ ಬಜೆಟ್ ಚಿತ್ರಗಳು ನಯನತಾರಾ ಅವರ ಕಾಲ್​ಶಿಟ್ ಪಡೆಯಲು ಪ್ರಯತ್ನಿಸುತ್ತಿವೆ.

ಜವಾನ್’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 342 ಕೋಟಿ ರೂಪಾಯಿ ಗಳಿಸಿದೆ. ವಿಶ್ವ ಮಟ್ಟದಲ್ಲಿ ಈ ಚಿತ್ರ 600 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನವೂ ಚಿತ್ರ ಎರಡಂಕಿ ಕಲೆಕ್ಷನ್ ಮಾಡುತ್ತಿದೆ ಅನ್ನೋದು ವಿಶೇಷ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago