ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಅಲರ್ಟ್​, ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ

0
150

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಶಂಕಿತ ಪ್ರಕರಣದ ಕುರಿತು ಕಣ್ಗಾವಲು ಕಚೇರಿಗೆ ಮಾಹಿತಿ‌ ನೀಡಬೇಕು. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ 10 ಹಾಸಿಗೆಯ ವಾರ್ಡ್​​ಗಳನ್ನು ತೆರೆಯಬೇಕು ಎಂದು ಸುತ್ತೋಲೆ ಹೊರಡಿಸಿದೆ.

LEAVE A REPLY

Please enter your comment!
Please enter your name here