ರಾಜ್ಯ

ಏಪ್ರಿಲ್​ ನಂತರ ಕರ್ನಾಟಕದಲ್ಲಿ 251 ರೈತರ ಆತ್ಮಹತ್ಯೆ; ತೊಂದರೆ ನೀಡುವ ಲೇವಾದೇವಿಗಾರರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಏಪ್ರಿಲ್‌ನಿಂದ ಇಲ್ಲಿಯವರೆಗೆ 251 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ರೈತರ ಆತ್ಮಹತ್ಯೆಗಳಿಗೆ ಲೇವಾದೇವಿಗಾರರು ಮತ್ತು ಬ್ಯಾಂಕ್‌ಗಳ ಕಿರುಕುಳವೇ ಮುಖ್ಯ ಕಾರಣ ಎನ್ನಲಾಗಿದೆ. ಮುಂಗಾರು ಮಳೆ ಕೊರತೆಯಿಂದಾಗಿ ಬೆಳೆ ನಷ್ಟವಾಗಿದ್ದು, ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ಹೆಚ್ಚಿನ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದು, ರೈತರಿಗೆ ತೊಂದರೆ ನೀಡುವ ಲೇವಾದೇವಿಗಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಇಒಗಳಿಗೆ ಸೂಚಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸದ್ಯದಲ್ಲೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

Advertisement
Advertisement
Advertisement

ಈವರೆಗೆ ಕೇವಲ 174 ಪ್ರಕರಣಗಳು ಮಾತ್ರ ಇತ್ಯರ್ಥಗೊಂಡಿವೆ ಎಂದ ಸಿದ್ದರಾಮಯ್ಯ, ಆತ್ಮಹತ್ಯೆ ಮಾಡಿಕೊಂಡ ರೈತರ ಉಳಿದ ಕುಟುಂಬಗಳಿಗೆ ಶೀಘ್ರವೇ ಪರಿಹಾರ ವಿತರಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಏಪ್ರಿಲ್‌ನಿಂದ 251 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವುದಾಗಿ ಮುಖ್ಯಮಂತ್ರಿ ಕಚೇರಿ ಖಚಿತಪಡಿಸಿದೆ. ಮೇ ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರ ಆತ್ಮಹತ್ಯೆ ಕುರಿತು ಅಧಿಕೃತ ಅಂಕಿಅಂಶ ಹೊರಬರುತ್ತಿರುವುದು ಇದೇ ಮೊದಲಾಗಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​​ಪ್ರೆಸ್’ ವರದಿ ಮಾಡಿದೆ.

2019 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು ನಡೆಸಿದ ಅಧ್ಯಯನವೊಂದರ ಪ್ರಕಾರ, 1996 ರಿಂದ ಸುಮಾರು 11,000 ರೈತರು ಆತ್ಮಹತ್ಯೆಯಿಂದಾಗಿ ಸಾವನ್ನಪ್ಪಿದ್ದಾರೆ. ಒಂದೆಡೆ ಪ್ರಕೃತಿಯ ವೈಪರೀತ್ಯಗಳು ಬೆಳೆಗಳಿಗೆ ಹಾನಿಯನ್ನುಂಟುಮಾಡಿದರೆ, ಲೇವಾದೇವಿದಾರರು ಹೇರಿದ ಹೆಚ್ಚಿನ ಬಡ್ಡಿಗೆ ರೈತರು ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿತ್ತು.

ಕಾಮಗಾರಿ ವಿಳಂಬ ತಪ್ಪಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು ತಹಶೀಲ್ದಾರ್, ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಬರುವ ಅರ್ಜಿಗಳು ಹಲವು ಕಚೇರಿಗಳಲ್ಲಿ ಐದು ವರ್ಷಗಳಿಂದ ಬಾಕಿ ಉಳಿದಿವೆ. ಇಷ್ಟು ವರ್ಷಗಳ ನಂತರವೂ ಪ್ರಕರಣವನ್ನು ಇತ್ಯರ್ಥಪಡಿಸದಿದ್ದರೆ, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ ಎಂದು ತರಾಟೆಗೆ ತೆಗೆದುಕೊಂಡರು. ವಿಳಂಬವಾದ ನ್ಯಾಯದಾನವು ನ್ಯಾಯದ ನಿರಾಕರಣೆಗೆ ಸಮ ಮತ್ತು ಹೆಚ್ಚು ತಡವಾದರೆ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅತಿಯಾದ ವಿಳಂಬವೂ ಭ್ರಷ್ಟಾಚಾರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago