ರಾಷ್ಟ್ರ

ಸಂಸತ್ ವಿಶೇಷ ಅಧಿವೇಶನ ಹಿನ್ನೆಲೆ: ಸೆಪ್ಟಂಬರ್ 17ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ

ದೆಹಲಿ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಈ ತಿಂಗಳ ಆರಂಭದಲ್ಲಿ ಘೋಷಿಸಿದ ಸಂಸತ್​​ನ ವಿಶೇಷ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಅಂದರೆ ಭಾನುವಾರ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಸರ್ವಪಕ್ಷ ಸಭೆಯಲ್ಲಿ ವಿಶೇಷ ಅಧಿವೇಶನದ ಅಜೆಂಡಾ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ವಿಶೇಷ ಅಧಿವೇಶನವು ಸಂಸತ್ ನ ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 19 ರಂದು ಹೊಸ ಕಟ್ಟಡಕ್ಕೆ ತೆರಳಲಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement

ಇದೇ ಸೆಪ್ಟೆಂಬರ್ 18 ರಿಂದ ಆರಂಭವಾಗಲಿರುವ ವಿಶೇಷ ಅಧಿವೇಶನದ ಪೂರ್ವಭಾವಿಯಾಗಿ ಸಪ್ಟೆಂಬರ್ 17 ರಂದು ಸಂಜೆ 4.30 ಕ್ಕೆ ಸರ್ವ ಪಕ್ಷಗಳ ನಾಯಕರ ಸಭೆಯನ್ನು ಕರೆಯಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣಗಳ ಖಾತೆ ಮೂಲಕ ಈ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವರು ವಿಶೇಷ ಅಧಿವೇಶನದ ಹಿನ್ನಲೆಯಲ್ಲಿ ಕರೆಯಲಾಗಿರುವ ಈ ಸರ್ವಪಕ್ಷ ಸಭೆಯ ಕುರಿತು ಎಲ್ಲಾ ಪಕ್ಷಗಳ ನಾಯಕರಿಗೂ ಈಗಾಗಲೇ ಈ-ಮೇಲ್ ಮೂಲಕ ಮಾಹಿತಿ ನೀಡಿ, ಆಮಂತ್ರಣ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಜೆಂಡಾದಲ್ಲಿ ಸ್ಪಷ್ಟತೆಯ ಕೊರತೆಯಿಂದಾಗಿ ವಿಶೇಷ ಅಧಿವೇಶನ ಘೋಷಣೆಯನ್ನು ವಿರೋಧ ಪಕ್ಷದ ನಾಯಕರು ವ್ಯಾಪಕವಾಗಿ ಟೀಕಿಸಿದ್ದಾರೆ. ಭಾರತದ ಪ್ರಮುಖ ಹಬ್ಬ ಗಣೇಶ ಚತುರ್ಥಿಯ ದಿನವೇ ಅಧಿವೇಶನ ಕರೆದಿದ್ದಕ್ಕಾಗಿ ಬಿಜೆಪಿ ವಿರುದ್ಧ ವಿಪಕ್ಷ ಟೀಕಾಪ್ರಹಾರ ಮಾಡಿದೆ.

ಭಾರತದ ಪ್ರಮುಖ ಹಬ್ಬವಾದ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕರೆಯಲಾದ ಈ ವಿಶೇಷ ಅಧಿವೇಶನವು ದುರದೃಷ್ಟಕರ ಮತ್ತು ಹಿಂದೂ ಭಾವನೆಗಳಿಗೆ ವಿರುದ್ಧವಾಗಿದೆ. ದಿನಾಂಕಗಳ ಆಯ್ಕೆಯಲ್ಲಿ ಆಶ್ಚರ್ಯವಾಯಿತ ಎಂದು ಶಿವಸೇನಾ ಯುಬಿಟಿಯ ಪ್ರಿಯಾಂಕಾ ಚತುರ್ವೇದಿ ಹೇಳಿದ್ದು, ಎನ್​​ಸಿಪಿ ನಾಯಕಿ ಸುಪ್ರಿಯಾ ಸುಳೆ ದಿನಾಂಕ ಮರುಹೊಂದಿಸಬೇಕೆಂದು ಒತ್ತಾಯಿಸಿದರು.

ನಮ್ಮಲ್ಲಿ ಯಾರಿಗೂ ಅದರ ಕಾರ್ಯಸೂಚಿಯ ಬಗ್ಗೆ ಯಾವುದೇ ಕಲ್ಪನೆಯಿಲ್ಲ. ಎಲ್ಲಾ ಐದು ದಿನಗಳನ್ನು ‘ಸರ್ಕಾರಿ ವ್ಯವಹಾರ’ಕ್ಕಾಗಿ ಮೀಸಲಿಡಲಾಗಿದೆ ಎಂದು ಪ್ರಧಾನಿಗೆ ಪತ್ರ ಬರೆದಿರುವ ಸೋನಿಯಾ ಮಣಿಪುರ ವಿಷಯ, ಕೋಮುವಾದದ ಹರಡುವಿಕೆ ಮತ್ತು ಚೀನಾದೊಂದಿಗೆ ದೀರ್ಘಕಾಲದ ಗಡಿ ಸಂಘರ್ಷ, ಬೀಜಿಂಗ್‌ನ ಹೊಸ ನಕ್ಷೆ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸುವಂತೆ ಒತ್ತಾಯಿಸಿದ್ದಾರೆ.

ವಿಶೇಷ ಅಧಿವೇಶನದ ಅಜೆಂಡಾ ಏನು?

ಅಧಿವೇಶನದ ಕಾರ್ಯಸೂಚಿಯು ಅಮೃತ್ ಕಾಲ್ ಮತ್ತು ಭಾರತವನ್ನು ‘ಅಭಿವೃದ್ಧಿ ಹೊಂದಿದ ರಾಷ್ಟ್ರ’ ಕುರಿತು ಚರ್ಚೆಗಳನ್ನು ಒಳಗೊಂಡಿರಬಹುದು ಎಂದು ಸರ್ಕಾರದ ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಇತರ ಸಂಭಾವ್ಯ ವಿಷಯಗಳು ಚಂದ್ರಯಾನ-3, ಭಾರತದ ಯಶಸ್ವಿ ಚಂದ್ರನ ಮಿಷನ್ ಮತ್ತು ಸೆಪ್ಟೆಂಬರ್ 8 ಮತ್ತು 10 ರ ನಡುವೆ ದೆಹಲಿಯಲ್ಲಿ ನಡೆದ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟ G20 ಶೃಂಗಸಭೆಯನ್ನು ಒಳಗೊಂಡಿರಬಹುದು ಎಂದು ಹೇಳಲಾಗುತ್ತದೆ.

ದೇಶದ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಸಾಧ್ಯತೆ ಇದೆ ಎಂಬ ವದಂತಿಯಿಂದಾಗಿ ಭಾರಿ ಗದ್ದಲದ ನಂತರ ಅಧಿವೇಶನವು ನಡೆಯಲಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago