ಪುತ್ತೂರು : ಬೆಳೆ ವಿಮೆ ಯೋಜನೆ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ತೋಟಗಾರಿಕೆ ಬೆಳೆ ಬೆಳೆದ ರೈತರ ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸದಲ್ಲಿ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ.
ಈ ಯೋಜನೆಯಡಿ ನೋಂದಾವಣೆಗೊಳ್ಳಲು ಬೆಳೆಸಲಾಗುವ ಬೆಳೆಯ ರೈತರ ಸರ್ವೇ ನಂಬರ್‍ನಲ್ಲಿ ಬೆಳೆ ಸಮೀಕ್ಷೆಯಡಿ ನಮೂದಾಗಿರುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆಯಡಿ ವಿಮೆ ಮಾಡಿಸಲಾಗುವ ಬೆಳೆಯು ನಮೂದಾಗದಿದ್ದ ಪಕ್ಷದಲ್ಲಿ ಇದೇ ಸೆ.15ರೊಳಗೆ ಬೆಳೆ ಸಮೀಕ್ಷೆ ಮಾಡಿ ಬೆಳೆ ನಮೂದಿಸಲಾಗುವುದೆಂದು ರೈತರಿಂದ ಒಪ್ಪಿಗೆ ಪತ್ರ ಪಡೆದು ಈ ಯೋಜನೆಯಡಿ ರೈತರನ್ನು ನೋಂದಾಯಿಸಲಾಗುವುದು.
ತಪ್ಪಿದ್ದಲ್ಲಿ ಅಂತಹ ರೈತರ ನೋಂದಾವಣೆಯನ್ನು ತಿರಸ್ಕೃತರಿಸಲಾಗುವುದು. ಆದ್ದರಿಂದ ಅಂತಹ ರೈತರು ತಾವೇ ಖುದ್ದಾಗಿ ಅಥವಾ ಬೆಳೆ ಸಮೀಕ್ಷೆ ಕೈಗೊಳ್ಳಲು ತಮ್ಮ ಗ್ರಾಮಕ್ಕೆ ನಿಯೋಜಿತರಾಗಿರುವ ಖಾಸಗಿ ನಿವಾಸಿಗಳ ಮುಖಾಂತರ ಬೆಳೆ ಸಮೀಕ್ಷೆ ಕೈಗೊಂಡು ವಿಮೆ ಮಾಡಿಸಿರುವ ಬೆಳೆಯನ್ನು ಬೆಳೆ ಸಮೀಕ್ಷೆಯಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…