ದೇಶ

ಮಹದೇವ್ ಬೆಟ್ಟಿಂಗ್ ಪ್ರಕರಣ: ₹417 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ದೆಹಲಿ, ಸೆಪ್ಟೆಂಬರ್ 15: ಮಹದೇವ್ ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ₹417 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ದುಬೈನಿಂದ ಕಾರ್ಯಾಚರಣೆ ನಡೆಸುತ್ತಿದ್ದ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರು ಪ್ರಚಾರ ಮಾಡುತ್ತಿರುವ ಕಂಪನಿಯು ಆನ್‌ಲೈನ್ ಬುಕ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ಹೊಸ ಬಳಕೆದಾರರನ್ನು ದಾಖಲಿಸಲು, ಬಳಕೆದಾರರ ಐಡಿಗಳನ್ನು ರಚಿಸಲು ಮತ್ತು ಬೇನಾಮಿ ಬ್ಯಾಂಕ್ ಖಾತೆಗಳ ಲೇಯರ್ಡ್ ವೆಬ್ ಮೂಲಕ ಹಣ ವ್ಯವಹಾರ ಮಾಡಲು ಬಳಸುತ್ತಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

Advertisement
Advertisement
Advertisement

ಇಡಿ ಇತ್ತೀಚೆಗೆ ಕೋಲ್ಕತ್ತಾ, ಭೋಪಾಲ್, ಮುಂಬೈ ಮುಂತಾದ ನಗರಗಳಲ್ಲಿ ಮಹಾದೇವ್ ಆ್ಯಪ್​​ನೊಂದಿಗೆ ಸಂಪರ್ಕ ಹೊಂದಿದ ಮನಿ ಲಾಂಡರಿಂಗ್ ನೆಟ್‌ವರ್ಕ್‌ಗಳ ವಿರುದ್ಧ ವ್ಯಾಪಕ ಶೋಧ ನಡೆಸಿ ದೊಡ್ಡ ಪ್ರಮಾಣದ ದೋಷಾರೋಪಣೆಯ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದ್ದು, 417 ಕೋಟಿ ರೂಪಾಯಿ ಮೌಲ್ಯದ ಅಪರಾಧದ ಆದಾಯವನ್ನು ವಶಪಡಿಸಿಕೊಂಡಿದೆ ಎಂದ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಮಹಾದೇವ್ ಆನ್‌ಲೈನ್ ಬುಕ್ ಆ್ಯಪ್ ಯುಎಇಯ ಕೇಂದ್ರ ಕಚೇರಿಯಿಂದ ನಡೆಸಲ್ಪಡುತ್ತಿದೆ ಎಂದು ಇಡಿ ತನಿಖೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago