ಬೆಂಗಳೂರು, (ಸೆಪ್ಟೆಂಬರ್ 15): ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್ಗೆ ನೀಡಿದ್ದೇನೆ ಎಂದು ಸತ್ಯ ಒಪ್ಪಿಕೊಂಡಿದ್ದಾನೆ. ಆದ್ರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.