ಬಂಟ್ವಾಳ : ಇದು ಮಹಿಳೆಯರಿಗಾಗಿಯೇ ಇರುವ ಸೌಲಭ್ಯ. ಹೆಸರು ಪಿಂಕ್ ಟಾಯ್ಲೆಟ್. ಜನನಿಬಿಡ ಪ್ರದೇಶ, ಮಾರುಕಟ್ಟೆ ಹಾಗೂ ಸಾರ್ವಜನಿಕರು ಹೆಚ್ಚಿನ ಪ್ರಮಾಣದಲ್ಲಿ ಸೇರುವ ಸ್ಥಳಗಳಲ್ಲಿ ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಗುಲಾಬಿ ಶೌಚಾಲಯಗಳನ್ನು ತೆರೆಯಲು ಕಳೆದ ವರ್ಷ ರಾಜ್ಯ ಸರಕಾರ ತೀರ್ಮಾನಿಸಿತ್ತು.
ಇದರ ಭಾಗವಾಗಿ ಮೈಸೂರಿನಲ್ಲಿ ಮೊದಲ ಪಿಂಕ್ ಟಾಯ್ಲೆಟ್ ನಿರ್ಮಾಣವಾಗಿತ್ತು. ಗುಲಾಬಿ ಶೌಚಾಲಯವೆಂದೇ ಹೇಳಲಾಗುವ ಪಿಂಕ್ ಟಾಯ್ಲೆಟ್ ಇದೀಗ ಬಂಟ್ವಾಳದಲ್ಲಿ ನಿರ್ಮಾಣಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊದಲಿನದ್ದು ಎಂಬ ಹೆಗ್ಗಳಿಕೆ ಪಡೆದಿದೆ.
ಇದನ್ನು ಗಮನಿಸಿದ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರು ಬಂಟ್ವಾಳದಲ್ಲೂ ಪಿಂಕ್ ಟಾಯ್ಲೆಟ್ ನಿರ್ಮಿಸುವ ಕುರಿತು ರೂಪುರೇಷೆ ಹಾಕಿದರು. ಹೀಗಾಗಿ ಬಂಟ್ವಾಳ ತಾಲೂಕು ಆಡಳಿತ ಸೌಧ (ಹಿಂದಿನ ಮಿನಿ ವಿಧಾನಸೌಧ)ದ ಗೇಟಿನ ಪಕ್ಕದಲ್ಲೇ ಫುಟ್ ಪಾತ್ ಇರುವ ಜಾಗದ ಸನಿಹದಲ್ಲಿ ಪಿಂಕ್ ಟಾಯ್ಲೆಟ್ ಈಗ ಕಾಣಿಸುತ್ತಿದೆ. ಬಂಟ್ವಾಳ ತಾಲೂಕಿನ ಕೇಂದ್ರಭಾಗವಾದ ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ಆಡಳಿತ ಸೌಧದ ಪಕ್ಕ ನಿರ್ಮಿಸಲಾದ ಈ ಶೌಚಾಲಯ ಮಹಿಳೆಯರ ಬಳಕೆಗೆಂದೇ ಮೀಸಲಾಗಿದೆ. ಅಮೃತ ನಿರ್ಮಲ ನಗರ ಯೋಜನೆಯಲ್ಲಿ ಪಿಂಕ್ ಟಾಯ್ಲೆಟ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಇದು ಮೊದಲ ಪಿಂಕ್ ಟಾಯ್ಲೆಟ್.
ಬಂಟ್ವಾಳ ಪುರಸಭೆಗೆ ಅಮೃತ ನಿರ್ಮಲ ನಗರ ಯೋಜನೆಯ ಮೂಲಕ ಬಂಟ್ವಾಳ ಪುರಸಭೆಗೆ ಬಂದ 1 ಕೋಟಿ ರೂ ಅನುದಾನದಲ್ಲಿ 25.5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.
ಏನೇನು ಇದರಲ್ಲಿದೆ?
ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿರುವ ಈ ಪಿಂಕ್ ಟಾಯ್ಲೆಟ್ ಕೇವಲ ಶೌಚಾಲಯವಲ್ಲ. ಬಿ.ಸಿ.ರೋಡಿಗೆ ಹತ್ತಾರು ಕೆಲಸಗಳಿಗೆ ಆಗಮಿಸುವ ಮಹಿಳೆಯರಿಗೆ ಇದು ಅನುಕೂಲವೂ ಆಗಲಿದೆ. ಹಾಲುಣಿಸುವ ಮಕ್ಕಳಿರುವ ತಾಯಂದಿರು ಆಗಮಿಸಿದ ಸಂದರ್ಭ ಅವರಿಗೆ ಸರಿಯಾದ ಫೀಡಿಂಗ್ ಏರಿಯಾಗಳು ದೊರಕುವುದಿಲ್ಲ. ಸದ್ಯಕ್ಕೆ ಬಿ.ಸಿ.ರೋಡಿನ ಆಡಳಿತ ಸೌಧದಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿ ಆವರಣದಲ್ಲಿ ಒಂದು ಫೀಡಿಂಗ್ ಏರಿಯಾ ಇದ್ದರೂ ಎಲ್ಲರಿಗೂ ಅಲ್ಲಿಗೆ ಹೋಗಲು ಅನಾನುಕೂಲ. ಪೇಟೆಗೆ ಪುಟ್ಟ ಮಗುವಿನೊಂದಿಗೆ ಕೋರ್ಟು, ಕಚೇರಿ, ಬ್ಯಾಂಕುಗಳಿಗೆ ಬಂದ ತಾಯಂದಿರಿಗೆ ಇಲ್ಲಿ ಹಾಲುಣಿಸುವುದಕ್ಕೆ ಪ್ರತ್ಯೇಕ ಜಾಗ ಮೀಸಲಾಗಿದೆ. ಅಲ್ಲದೆ, ಮಹಿಳೆಯರಿಗೆ ವಿಶ್ರಾಂತಿ ಕೊಠಡಿ, ಸ್ಯಾನಿಟರಿ ನ್ಯಾಪ್ ಕಿನ್ ವ್ಯವಸ್ಥೆಯೂ ಇದೆ. ಸುಸಜ್ಜಿತ ವ್ಯವಸ್ಥೆಯನ್ನು ಇದು ಒಳಗೊಂಡಿರುತ್ತದೆ. ದೂರದೂರಿನಿಂದ ಮಕ್ಕಳೊಂದಿಗೆ ಬರುವವರು ಇಲ್ಲಿ ಹಾಲುಣಿಸಬಹುದು. ಅಲ್ಲದೇ ಇಲ್ಲಿ ಸ್ಯಾನಿಟರಿ ಪ್ಯಾಡ್‌ಗಳನ್ನು ಇಡಲಾಗಿರುತ್ತದೆ. ಜೊತೆಗೆ ಬಟ್ಟೆ ಬದಲಾಯಿಸಿಕೊಳ್ಳಲು ಡ್ರೆಸ್ಸಿಂಗ್ ರೂಂ ಕೂಡ ಇರುತ್ತದೆ.
ಈಗಾಗಲೇ ನೋಯ್ಡಾ, ತಮಿಳುನಾಡು ಸೇರಿದಂತೆ ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ ಈ ಯೋಜನೆ ಯಶಸ್ವಿಯಾಗಿವೆ. ಸದಾ ಜನದಟ್ಟಣೆ ಇರುವಂತಹ ಜಾಗ, ವಾಣಿಜ್ಯ ಸಂಕೀರ್ಣಗಳು, ಬಟ್ಟೆ, ಆಹಾರ, ಬೇಕರಿ, ಚಿನ್ನಾಭರಣ, ಬ್ಯಾಂಕ್, ಎಟಿಎಂ, ಶೂ, ಮೊಬೈಲ್ ಫೋನ್ ಸೇರಿದಂತೆ ಸಾಕಷ್ಟು ಅಂಗಡಿ-ಮಳಿಗೆಗಳು ಇರುವ ಜಾಗದಲ್ಲಿ ನಿತ್ಯ ಸಾವಿರಾರು ಜನ ಓಡಾಡುವಲ್ಲಿ ಇದು ಪ್ರಯೋಜನಕಾರಿ. ಮದುವೆ, ಮುಂಜಿಯಿಂದ ಹಿಡಿದು ನಾನಾ ಶುಭ ಸಮಾರಂಭಗಳಿಗೆ ಸಾರ್ವಜನಿಕರು ಪೇಟೆಗೆ ಆಗಮಿಸುತ್ತಾರೆ. ಹಾಗಾಗಿ ಮಹಿಳೆಯರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಪಿಂಕ್ ಶೌಚಾಲಯ ನಿರ್ಮಿಸಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…