ರಾಜ್ಯ

ಕೆಎಸ್​ಆರ್​ಟಿಸಿಗೆ ಚೊಚ್ಚಲ ‘ಇವಿ ಪವರ್ ಪ್ಲಸ್’ ಬಸ್​ಗೆ ರಾಷ್ಟ್ರೀಯ ಪ್ರಶಸ್ತಿ: ಸಿಎಂ ಪ್ರಶಂಸೆ

ಬೆಂಗಳೂರು (ಸೆ.15): ಕೆಎಸ್​ಆರ್​ಟಿಸಿ ಚೊಚ್ಚಲ ವಿದ್ಯುತ್ ಚಾಲಿತ ಬಸ್ ಸೇವೆಯಾದ ಇವಿ ಪವರ್ ಪ್ಲಸ್​​ಗೆ ವಿಶ್ವ ತಯಾರಿಕೆದಾರರ ಕಾಂಗ್ರೆಸ್ ಸ್ಥಾಪಿಸಿರುವ 10ನೇ ಆವೃತ್ತಿಯ ರಾಷ್ಟ್ರೀಯ ನಾಯಕತ್ವ ಹಾಗೂ ವಿದ್ಯುತ್ ವಾಹನಗಳ ಉಪಕ್ರಮಗಳ ಪ್ರಶಸ್ತಿ ಲಭಿಸಿದೆ. ನಗರದ ತಾಜ್ ಹೋಟೆಲ್​ನಲ್ಲಿ ವಿಶ್ವ ತಯಾರಿಕೆದಾರರ ಕಾಂಗ್ರೆಸ್​ ಸ್ಥಾಪಿಸಿರುವ 10ನೇ ಆವೃತ್ತಿಯ ರಾಷ್ಟ್ರೀಯ ನಾಯಕತ್ವ ಹಾಗೂ ವಿದ್ಯುತ್ ವಾಹನಗಳ ಉಪಕ್ರಮಗಳ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

Advertisement
Advertisement
Advertisement

ಕೆಎಸ್​ಆರ್​ಟಿಸಿ ಪರಿಚಯಿಸಿರುವ ಅಂತರ್​​ನಗರ ಎಲೆಕ್ಟ್ರಿಕ್ ಬಸ್ ಉಪಕ್ರಮಕ್ಕಾಗಿ ರಾಷ್ಟ್ರೀಯ ನಾಯಕತ್ವ ಹಾಗೂ ವಿದ್ಯುತ್ ವಾಹನಗಳ ಉಪಕ್ರಮಗಳ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಗುರ್ಗಾಂವ್​ನ ಅಡ್ವಾಂಟೇಜ್ ಕ್ಲಬ್​ನ ಸಿಇಒ ಹಾಗೂ ಸಹ ಸಂಸ್ಥಾಪಕಿ ಸ್ಮಿತಿ ಭಟ್​ ದಿಯೋರ 10ನೇ ಆವೃತ್ತಿಯ ರಾಷ್ಟ್ರೀಯ ನಾಯಕತ್ವ ಹಾಗೂ ವಿದ್ಯುತ್ ವಾಹನಗಳ ಉಪಕ್ರಮಗಳ ಉತ್ತಮ ವರ್ಷದ ಅಂತರನಗರ ಎಲೆಕ್ಟ್ರಿಕ್​ ಬಸ್​ – ಇವಿ ಪವರ್​ ಪ್ಲಸ್ ಬಸ್​ಗೆ ಪ್ರಶಸ್ತಿ ಪ್ರದಾನ ಮಾಡಿದರು. ನಿಗಮದ ಅಧಿಕಾರಿಗಳಾದ ಎನ್.ಕೆ. ಬಸವರಾಜು, ಜಿ. ಅಂತೋಣಿ ಜಾರ್ಜ್ ಹಾಗೂ ಶಿವಕುಮಾರ್ ಜಂಟಿಯಾಗಿ ಪ್ರಶಸ್ತಿಯನ್ನು ನಿಗಮದ ಪರವಾಗಿ ಸ್ವೀಕರಿಸಿದರು.

ಈ ಬಗ್ಗೆ ಸಿಎಂ ಆಫ್ ಕರ್ನಾಟಕ ಟ್ವಟರ್‌ನಲ್ಲಿ, ರಾಜ್ಯದ ಮೂಲೆ ಮೂಲೆಗಳಿಗೆ ಸಂಪರ್ಕ ಕಲ್ಪಿಸುವ ನಾಡಿನ ಹೆಮ್ಮೆಯ ಕೆ.ಎಸ್.ಆರ್.ಟಿ.ಸಿ ಸಾರಿಗೆ ಸಂಸ್ಥೆಯಲ್ಲಿ ಎಲೆಕ್ಟ್ರಿಕ್‌ ಬಸ್‌ ಬಳಕೆಗೆ ಸರ್ಕಾರ ನೀಡುತ್ತಿರುವ ವ್ಯಾಪಕ ಉತ್ತೇಜನದ ಫಲವಾಗಿ ವರ್ಲ್ಡ್‌ ಮ್ಯಾನುಫ್ಯಾಕ್ಚರಿಂಗ್‌ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕತ್ವ ಮತ್ತು ವಿದ್ಯುತ್‌ ವಾಹನಗಳ ಉಪಕ್ರಮ ಪ್ರಶಸ್ತಿ ದೊರೆತಿರುವುದು ಸಂತಸ ಮೂಡಿಸಿದೆ. ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಪರಿಸರ ಸ್ನೇಹಿ ಮತ್ತು ಪ್ರಯಾಣಿಕರ ಸ್ನೇಹಿಯಾಗಿಸುವ ನಮ್ಮ ಪ್ರಯತ್ನಕ್ಕೆ ಈ ಪ್ರಶಸ್ತಿಯು ಪುಷ್ಟಿ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಪೋಸ್ಟ್‌ ಮಾಡಲಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago