ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

0
106

ಮಂಗಳೂರು, ಸೆ. 15 : ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ನ ವಿದ್ಯಾರ್ಥಿಗಳಿಗೆ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅಕ್ಟೋಬರ್ 11ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆ ವೆಬ್‍ಸೈಟ್ ನ್ನು ನೋಡಬಹುದು.ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಜಿಲ್ಲಾ ಅಥವಾ ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರನ್ನು ಸೂಕ್ತ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050770005 ಅನ್ನು ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here