ಸಿಂಗಾಪುರದ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ

0
90

ಸಿಂಗಾಪುರ, ಸೆ 15 : ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಅವರು ಸಿಂಗಾಪುರದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸೆಪ್ಟೆಂಬರ್ 13 ರಂದು ಹಲೀಮಾ ಯಾಕೋಬ್ ಅವರ ಅಧಿಕಾರಾವಧಿ ಕೊನೆಗೊಂಡಿದ್ದು, ಈಗ ಥರ್ಮನ್ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇನ್ನು ಷಣ್ಮುಗರತ್ನಂ ಅವರು ಸಿಂಗಾಪುರ ಅಧ್ಯಕ್ಷೀಯ ಚುನಾವಣೆಯಲ್ಲಿ ಐತಿಹಾಸಿಕ ಜಯ ದಾಖಲಿಸಿದ್ದು, ಚೀನಾದ ಕೋಕ್ ಸಾಂಗ್ ಮತ್ತು ಟಾನ್ ಕಿನ್ ಲಿಯಾನ್ ಅವರನ್ನು ದೊಡ್ಡ ಅಂತರದಿಂದ ಸೋಲಿಸಿದ್ದರು.

LEAVE A REPLY

Please enter your comment!
Please enter your name here