ನವದೆಹಲಿ, ಸೆಪ್ಟೆಂಬರ್ 16: ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ (Nipah) ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮುಖ್ಯಸ್ಥ ಡಾ ರಾಜೀವ್ ಬಹ್ಲ್ ಶುಕ್ರವಾರ ಹೇಳಿದ್ದಾರೆ. ಡಾ ಬಹ್ಲ್ ಅವರ ಪ್ರಕಾರ, ಕೋವಿಡ್‌ನ ಶೇ 2-3 ಮರಣ ಪ್ರಮಾಣಕ್ಕೆ ಹೋಲಿಸಿದರೆ ನಿಫಾ ವೈರಸ್ ಸೋಂಕಿನಿಂದ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಕ್ಕೆ ತಲುಪಿದೆ.
ಕೇರಳದಲ್ಲಿ ಪ್ರಕರಣಗಳ ಹೆಚ್ಚಳದ ಮಧ್ಯೆ, ನಿಫಾ ವೈರಸ್ ಸೋಂಕಿಗೆ ಚಿಕಿತ್ಸೆ ನೀಡಲು ಇನ್ನೂ 20 ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪೂರೈಸುವಂತೆ ಭಾರತವು ಆಸ್ಟ್ರೇಲಿಯಾಕ್ಕೆ ಮನವಿ ಮಾಡಿದೆ.
ದಕ್ಷಿಣದ ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಪ್ರಮಾಣ ಹೆಚ್ಚುತ್ತಿರುವುದು ಮತ್ತು ಕೋವಿಡ್‌ಗೆ ಹೋಲಿಸಿದರೆ ಹೆಚ್ಚಿನ ಮರಣ ಪ್ರಮಾಣ ಹೊಂದಿರುವುದರಿಂದ ಅದರ ವಿರುದ್ಧ ಲಸಿಕೆ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಐಸಿಎಂಆರ್ ತಿಳಿಸಿದೆ.
ನಾವು 2018 ರಲ್ಲಿ ಆಸ್ಟ್ರೇಲಿಯಾದಿಂದ ಕೆಲವು ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪಡೆದುಕೊಂಡಿದ್ದೆವು. ಪ್ರಸ್ತುತ, ಕೇವಲ 10 ರೋಗಿಗಳಿಗೆ ಮಾತ್ರ ಸಾಕಾಗುವಷ್ಟು ಲಭ್ಯವಿವೆ ಎಂದು ಡಾ.ರಾಜೀವ್ ಬಹ್ಲ್ ತಿಳಿಸಿದ್ದಾರೆ.
ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಕೋಝಿಕ್ಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳು ಇಂದಿನಿಂದ ಒಂದು ವಾರದವರೆಗೆ ರಜೆ ಘೋಷಿಸಿವೆ.
ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಪರ್ಕ ಪಟ್ಟಿ 1,080ಕ್ಕೆ ಏರಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ಹೇಳಿದ್ದಾರೆ. ಇವರಲ್ಲಿ 327 ಮಂದಿ ಆರೋಗ್ಯ ಕಾರ್ಯಕರ್ತರಾಗಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…