ಜಿಲ್ಲೆ

13 ವರ್ಷ ಭಾರತಾಂಬೆಯ ಸೇವೆ ಮಾಡಿದ ಕೊಡಗಿನ ಯೋಧ ಅನಾರೋಗ್ಯದಿಂದ ನಿಧನ

ಮಡಿಕೇರಿ: ಬೆಂಗಳೂರಿನ ಮಿಲಿಟರಿ ಎಂಇಜಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

Advertisement
Advertisement
Advertisement

ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಸಣ್ಣಪುಲಿಕೋಟು ಗ್ರಾಮದ ಜಿತಿನ್ (31) ಮೃತಪಟ್ಟ ಯೋಧ. ಸಣ್ಣಪುಲಿಕೋಟು ಗ್ರಾಮದ ಕಾಳಪ್ಪ ಮತ್ತು ದಮಯಂತಿ ಪುತ್ರರಾಗಿರುವ ಜಿತಿನ್ 2012ರಲ್ಲಿ ಮಿಲಿಟರಿ ಸೇವೆಗೆ ಸೇರಿದ್ದು, 11 ವರ್ಷಗಳ ಸೇವೆಯನ್ನು ಪೂರೈಸಿದ್ದಾರೆ. ಆರಂಭದಲ್ಲಿ ಬೆಂಗಳೂರಿನಲ್ಲಿ ತರಬೇತಿಗೆ ಸೇರಿದ್ದು, ಜಮ್ಮು ಹಾಗೂ ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಬೆಂಗಳೂರಿನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ವಿದೇಶಕ್ಕೆ ತೆರಳುವ ಉದ್ದೇಶದಿಂದ ಜಿತಿನ್ ಹೆಚ್ಚಿನ ತರಬೇತಿಯನ್ನು ಪಡೆಯುತ್ತಿದ್ದರು. ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ಸಂದರ್ಭ ಬಿದ್ದು ಅವರ ಕಿಡ್ನಿಗೆ ತೊಂದರೆಯಾಗಿತ್ತು. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದಿದ್ದರು. ತರಬೇತಿ ಮುಕ್ತಾಯ ಹಂತದಲ್ಲಿದ್ದು, ಕೊನೆಯ ದಿನವಾದ ಶುಕ್ರವಾರ ಬೆಳಗ್ಗಿನ ಜಾವ ಓಟದ ಸಂದರ್ಭ ಕುಸಿದು ಬಿದ್ದಿದ್ದಾರೆ. ಅವರನ್ನು ಕಮಾಂಡೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಐಸಿಯುಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಒಂದೂವರೆ ವರ್ಷಗಳ ಹಿಂದಷ್ಟೇ ಜಿತಿನ್ ವನಿತಾ ಎಂಬವರನ್ನು ವಿವಾಹವಾಗಿದ್ದರು. ಅವರ ಪತ್ನಿ ವೀರಾಜಪೇಟೆ ಎಸ್‌ಬಿಐ ಬ್ಯಾಂಕ್ ಉದ್ಯೋಗಿಯಾಗಿದ್ದು, ಆ ಕೆಲಸ ಬಿಟ್ಟು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಪತಿಯೊಂದಿಗೆ ವಾಸವಿದ್ದರು. ಜಿತಿನ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಸೇನಾ ಗೌರವ ಸಲ್ಲಿಸಿ ಶುಕ್ರವಾರ ಸಂಜೆ ಬೆಂಗಳೂರಿನಿಂದ ಕಳುಹಿಸಿಕೊಡಲಾಗಿದೆ. ಶನಿವಾರ ಸಣ್ಣಪುಲಿಕೋಟು ಮೇಲ್ಕಟ್ಟು ಶಾಲೆಯ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago