ರಾಜ್ಯ

ಸನಾತನ ಧರ್ಮ ಕರ್ತವ್ಯಗಳ ಗುಚ್ಛ, ಆದರೆ ಜಾತೀಯತೆ-ಅಸ್ಪೃಶ್ಯತೆಯನ್ನೇ ವೈಭವೀಕರಿಸಲಾಗುತ್ತಿದೆ; ಮದ್ರಾಸ್ ಹೈಕೋರ್ಟ್

ಚೆನ್ನೈ, ಸೆಪ್ಟೆಂಬರ್ 16: ಸನಾತನ ಧರ್ಮ ಎಂಬುದು ಕರ್ತವ್ಯಗಳ ಗುಚ್ಛ. ಆದರೆ, ಜಾತೀಯತೆ ಹಾಗೂ ಅಸ್ಪೃಶ್ಯತೆ ಎಂಬ ಅಂಶಗಳನ್ನಷ್ಟೇ ವೈಭವೀಕರಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅರ್ಜಿಯೊಂದರ ವಿಚಾರಣೆ ವೇಳೆ ಈ ವಿಚಾರ ಉಲ್ಲೇಖಿಸಿದ ನ್ಯಾಯಮೂರ್ತಿ ಎನ್ ಶೇಷಸಾಯಿ ಅವರು, ಸನಾತನ ಧರ್ಮ ಎಂಬುದು ಕರ್ತವ್ಯಗಳ ಗುಚ್ಛವಾಗಿದೆ. ಅದರಲ್ಲಿ ದೇಶದ ಕರ್ತವ್ಯ, ರಾಜನ ಕರ್ತವ್ಯ, ಪೋಷಕರ ಕರ್ತವ್ಯ, ಗುರುವಿನ ಕರ್ತವ್ಯ ಹೀಗೆ ಹಲವು ಅಂಶಗಳು ಸೇರಿವೆ. ಅದೇ ರೀತಿ ಸನಾತನ ಧರ್ಮದ ವಿರೋಧವು ಈ ಎಲ್ಲಾ ಕರ್ತವ್ಯಗಳನ್ನು ನಾಶಪಡಿಸುತ್ತದೆ ಎಂದು ಅರ್ಥ ಎಂದು ಹೇಳಿದರು.

Advertisement
Advertisement
Advertisement

ತಮಿಳುನಾಡು ಮಾಜಿ ಸಿಎಂ ಅಣ್ಣಾದೊರೈ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಸನಾತನ ಧರ್ಮದ ವಿರುದ್ಧದ ಅಂಶಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ತಿರು ವಿ ಕಾ ಗವರ್ನಮೆಂಟ್ ಆರ್ಟ್ಸ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ಸುತ್ತೋಲೆ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎನ್ ಶೇಷಸಾಯಿ ಅವರಿದ್ಧ ಪೀಠ ನಡೆಸಿತು.

ಸನಾತನ ಧರ್ಮವು ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತದೆ ಎಂಬುದೇ ಪ್ರಸ್ತುತ ಕಾಣಿಸಿಕೊಳ್ಳುತ್ತಿರುವ ಕಲ್ಪನೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಸಂವಿಧಾನದ 15ನೇ ಪರಿಚ್ಛೇದದ ಅಡಿಯಲ್ಲಿ ರದ್ದುಪಡಿಸಲಾದ ಅಸ್ಪೃಶ್ಯತೆಯನ್ನು ಸನಾತನ ಧರ್ಮದ ಒಳಗೆ ಅಥವಾ ಹೊರಗೆ ಸಹ ಸಹಿಸಬಾರದು ಎಂಬುದನ್ನು ನ್ಯಾಯಾಲಯ ಒತ್ತಿ ಹೇಳುತ್ತದೆ ಎಂದು ಪೀಠ ಹೇಳಿದೆ.

ಸಂವಿಧಾನದ 19(1)(ಎ) ಪರಿಚ್ಛೇದವು ವಾಕ್ ಸ್ವಾತಂತ್ರ್ಯಕ್ಕೆ ಮೂಲಭೂತ ಹಕ್ಕನ್ನು ನೀಡಿರುವುದು ನಿಜ. ಆದರೂ, ಮಾತನಾಡುವ ವಿಷಯಕ್ಕೆ ಮೌಲ್ಯ ಇರಬೇಕು ಎಂಬುದನ್ನೂ ಗಮನಿಸಬೇಕಿದೆ ಎಂದು ನ್ಯಾಯಾಲಯವು ಹೇಳಿದೆ. ವಾಕ್ ಸ್ವಾತಂತ್ರ್ಯವು ಸಂಪೂರ್ಣ ಮೂಲಭೂತ ಹಕ್ಕಲ್ಲ. ಧರ್ಮಕ್ಕೆ ಸಂಬಂಧಿಸಿದ ವಾಕ್ ಸ್ವಾತಂತ್ರ್ಯದ ವಿಚಾರದಲ್ಲಿ, ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ, ಯಾರಿಗೂ ನೋವಾಗದಂತೆ ನೋಡಿಕೊಳ್ಳುವುದು ಅವಶ್ಯಕ ಎಂದು ಪೀಠ ಹೇಳಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago