ಗುಡ್ಡೆಯಂಗಡಿಯಲ್ಲಿ ಗೌಪ್ಯವಾಗಿ ನಿರ್ಮಾಣವಾಗುತ್ತಿದ್ದ ಮನೆ ಯಾರದ್ದು? ಚೈತ್ರಾ ಪ್ರಕರಣಕ್ಕೆ ಇದೆಯಂತೆ ಲಿಂಕ್

0
103

ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುತ್ತೇನೆ ಎಂದು ಉದ್ಯಮಿಗೆ ಉಂಡೆ ನಾಮ ತಿಕ್ಕಿದ ಚೈತ್ರಾ ಕುಂದಾಪುರ ಗ್ಯಾಂಗ್ ಪೀಕಿಸಿದ 5.50 ಕೋಟಿ ರೂ. ಅನ್ನು ಏನು ಮಾಡಿದೆ? ಯಾರೆಲ್ಲಾ ಎಷ್ಟು ಹಂಚಿಕೊಂಡಿದ್ದಾರೆ ಎಂದು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಯಿಂದ ಚೈತ್ರಾ ಮತ್ತು ಏಳು ಜನರ ಗ್ಯಾಂಗ್ ಬರೋಬ್ಬರಿ 5.50 ಕೋಟಿ ರೂ. ಪೀಕಿಸಿದೆ. ಟಿಕೆಟ್ ಸಿಗದೆ ಕಾಸು ಕಳೆದುಕೊಂಡ ಗೋವಿಂದ ಪೂಜಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚೈತ್ರಾ ಮತ್ತು ತಂಡ ಆ ಹಣವನ್ನು ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ? ಯರ‍್ಯಾರಿಗೆ ಎಷ್ಟೆಷ್ಟು ಹಂಚಿದ್ದಾರೆ ಎಂದು ಇನ್ನಷ್ಟೇ ವಿಚಾರಗಳು ಬಹಿರಂಗ ಆಗಬೇಕಾಗಿದೆ.

ಈ ನಡುವೆ ಚೈತ್ರಾಳ ಗೆಳೆಯ ಶ್ರೀಕಾಂತ್ ನಾಯಕ್ ಗುಡ್ಡೆಯಂಗಡಿಯಲ್ಲಿ ಜಮೀನು ಖರೀದಿಸಿ ಅದರಲ್ಲಿ ಮನೆ ಕಟ್ಟಿಸಿಕೊಳ್ಳುತ್ತಿದ್ದಾನೆ. ಜಮೀನು ಮತ್ತು ಮನೆಗೆ ಒಟ್ಟು ಒಂದು ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂಬ ಮಾಹಿತಿ ಇದೆ. ಶ್ರೀಕಾಂತ್ ನಾಯಕ್ ಈ ಮನೆಯನ್ನು ಕಟ್ಟಿಸುತ್ತಿದ್ದಾರೋ ಅಥವಾ ಚೈತ್ರಾ ಕುಂದಾಪುರ ಹೂಡಿಕೆ ಮಾಡಿದ್ದಾರೋ ಎಂಬ ವಿಚಾರಗಳು ಇನ್ನಷ್ಟೇ ತನಿಖೆಯಿಂದ ಹೊರ ಬರಬೇಕಾಗಿದೆ.

LEAVE A REPLY

Please enter your comment!
Please enter your name here