ದೇಶ

ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು – INDIAಗೆ ಸೋನಿಯಾ ಕರೆ

ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA (ಇಂಡಿಯಾ) ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.

Advertisement
Advertisement
Advertisement

ಶನಿವಾರ ಮುಂಬೈನಲ್ಲಿ ಐಎನ್‌ಡಿಐಎ (ಇಂಡಿಯಾ) ಒಕ್ಕೂಟದ ಉನ್ನತಮಟ್ಟದ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.

ಮೈತ್ರಿಕೂಟದ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸುವುದಾಗಿ ಹೇಳಿವೆ ಎಂದರಲ್ಲದೇ, ಕೆಲವು ರಾಜ್ಯಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟಗೊಳ್ಳುತ್ತಿದೆ ಅನ್ನೋದು ಊಹಾಪೋಹ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ದೇಶದ ಆರ್ಥಿಕತೆಯು ಅಪಾಯದಲ್ಲಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ. ಈ ನಡುವೆ ಚೀನಾದ ಅತಿಕ್ರಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ದೇಶದ ಭದ್ರತೆಗೂ ಅಪಾಯವನ್ನುಂಟು ಮಾಡುವ ಸನ್ನಿವೇಶ ತಂದೊಡ್ಡಿದೆ. ಆದರೆ ಕೇಂದ್ರ ಅಮೃತಕಾಲ್ ಹಾಗೂ 3ನೇ ಅತಿದೊಡ್ಡ ಆರ್ಥಿಕ ದೇಶ ಎಂಬ ಖಾಲಿ ಘೋಷಣೆಗಳನ್ನ ಮಾಡುತ್ತ ನೈಜ ಸಮಸ್ಯೆಗಳಿಂದ ಗಮನವನ್ನ ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗಳ ಸಿದ್ಧತೆ ಬಗ್ಗೆಯೂ ಚರ್ಚಿಸಲಾಯಿತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಮತ್ತು ಜೈರಾಮ್ ರಮೇಶ್, ಶಶಿ ತರೂರ್, ಸಚಿನ್ ಪೈಲಟ್, ಗೌರವ್ ಗೊಗೊಯ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago