ಅಂತರಾಷ್ಟ್ರೀಯ

ಹಸಿವಿನ ಬಿಕ್ಕಟ್ಟು ತ್ರೀವ ಹೆಚ್ಚಳ- ವಿಶ್ವಸಂಸ್ಥೆ ಆಹಾರ ಯೋಜನೆ ವರದಿ

ಜಿನೆವಾ, ಸೆ 16 : ಪ್ರಪಂಚದಲ್ಲೆಡೆ ಹತ್ತು ಜನರಲ್ಲಿ ಒಬ್ಬರು ಪ್ರತೀ ರಾತ್ರಿ ಹಸಿವಿನಿಂದ ಮಲಗುವ ಸ್ಥಿತಿಯಿದೆ. 700 ದಶಲಕ್ಷಕ್ಕೂ ಅಧಿಕ ಜನರು ಹಸಿವಿನ ಸಂಕಟದಲ್ಲಿದ್ದು ಮಾನವೀಯ ನೆರವಿನ ನಿಧಿಗೆ ಕೊಡುಗೆ ಕ್ಷೀಣಿಸುತ್ತಿರುವುದು ಈ ಸಮಸ್ಯೆಯನ್ನು ಮತ್ತಷ್ಟು ಭಯಾನಕವಾಗಿಸಿದೆ ಎಂದು ವಿಶ್ವಸಂಸ್ಥೆ ಆಹಾರ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸಿಂಡಿ ಮೆಕೈನ್ ಆತಂಕ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು `ಹಣಕಾಸಿನ ಕೊರತೆಯಿಂದಾಗಿ ಲಕ್ಷಾಂತರ ಮಂದಿಗೆ ಆಹಾರ ಪಡಿತರವನ್ನು ಕಡಿತಗೊಳಿಸುವ ಅನಿವಾರ್ಯತೆಗೆ ನಾವು ಸಿಲುಕಿದ್ದೇವೆ.

ಜಾಗತಿಕ ಮಾನವೀಯ ಅಗತ್ಯಗಳನ್ನು ಉತ್ತೇಜಿಸುವ ಏಕಕಾಲೀನ ಮತ್ತು ದೀರ್ಘಾವಧಿಯ ಬಿಕ್ಕಟ್ಟುಗಳ ಸರಣಿಯೊಂದಿಗೆ ನಾವು ಜೀವಿಸುತ್ತಿದ್ದೇವೆ. ಇದು ಮಾನವೀಯ ಸಮುದಾಯದ ಹೊಸ ವಾಸ್ತವಿಕತೆಯಾಗಿದೆ. ಈ ಪರಿಸ್ಥಿತಿ ಮುಂದಿನ ಹಲವು ವರ್ಷ ಮುಂದುವರಿಯುವ ನಿರೀಕ್ಷೆಯಿದೆ ‘ ಎಂದರು.

ಸಾಂಕ್ರಾಮಿಕ ರೋಗ, ಉಕ್ರೇನ್‍ನಲ್ಲಿನ ಯುದ್ಧದಿಂದ ಉಂಟಾದ ಆರ್ಥಿಕ ಬಿಕ್ಕಟ್ಟು ಆಹಾರದ ಬೆಲೆಯನ್ನು ಜಗತ್ತಿನಾದ್ಯಂತ ಕೋಟ್ಯಾಂತರ ಜನರ ಕೈಗೆ ನಿಲುಕದಷ್ಟು ಎತ್ತರಕ್ಕೇರಿಸಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಹಸಿವು ಮತ್ತು ಬಡತನವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮತ್ತು ದೀರ್ಘಾವಧಿಯಲ್ಲಿ ಮಾನವೀಯ ಅಗತ್ಯಗಳನ್ನು ಕಡಿಮೆ ಮಾಡಲು ಮಹಾತ್ವಾಕಾಂಕ್ಷೆಯ, ಬಹುವಲಯ ಪಾಲುದಾರಿಕೆಯನ್ನು ಹೆಚ್ಚಿಸುವ ಸವಾಲು ನಮ್ಮ ಎದುರಿಗಿದೆ ಎಂದು ಸಿಂಡಿ ಮೆಕೈನ್ ತಿಳಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago