ಕೊಲಂಬೊ(ಸೆ.17): ಈ ಬಾರಿ ಏಷ್ಯಾದ ಕ್ರಿಕೆಟ್ ಅಧಿಪತಿ ಯಾರಾಗಲಿದ್ದಾರೆ ಎಂಬ ಕ್ರೀಡಾಭಿಮಾನಿಗಳ ಕುತೂಹಲಕ್ಕೆ ತೆರೆ ಬೀಳುವ ಸಮಯ ಬಂದಿದೆ. ಭಾನುವಾರ 16ನೇ ಆವೃತ್ತಿ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ ನಡೆಯಲಿದ್ದು, ಭಾರತ ಹಾಗೂ ಶ್ರೀಲಂಕಾ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
ಏಷ್ಯಾಕಪ್‌ನಲ್ಲಿ ಈವರೆಗೆ ಟೀಂ ಇಂಡಿಯಾ ಹೆಚ್ಚಿನ ಯಶಸ್ಸು ಸಾಧಿಸಿದ್ದು, 7 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ತ ಟೂರ್ನಿಯಲ್ಲಿ ಭಾರತದ ಪ್ರಬಲ ಎದುರಾಳಿಯಾಗಿರುವ ಶ್ರೀಲಂಕಾ 6 ಬಾರಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಆದರೆ ಕಳೆದ 5 ವರ್ಷಗಳಲ್ಲಿ ಐಸಿಸಿ ಜೊತೆ ಏಷ್ಯಾಕಪ್ ಪ್ರಶಸ್ತಿಗೂ ಬರ ಎದುರಿಸುತ್ತಿರುವ ಭಾರತ ಈ ಬಾರಿ ಅದನ್ನು ನೀಗಿಸಲು ಎದುರು ನೋಡುತ್ತಿದೆ. ಹಾಲಿ ಚಾಂಪಿಯನ್ ಲಂಕಾ ತವರಿನಲ್ಲಿ ಪ್ರಶಸ್ತಿ ತನ್ನಲ್ಲೇ ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.
ಕುಗ್ಗಿದ ಆತ್ಮವಿಶ್ವಾಸ:
ಸೂಪರ್-4 ಹಂತದ ಕೊನೆ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಸೋಲನುಭವಿಸಿದ್ದು, ಫೈನಲ್ ಪಂದ್ಯಕ್ಕೂ ಮುನ್ನ ತಂಡದ ಆತ್ಮವಿಶ್ವಾಸ ಕುಗ್ಗಿಸಿದ್ದು ಸುಳ್ಳಲ್ಲ. ಕಳೆದೆರಡೂ ಪಂದ್ಯಗಳಲ್ಲಿ ಭಾರತ ಬ್ಯಾಟಿಂಗ್‌ನಲ್ಲಿ ನೀರಸ ಪ್ರದರ್ಶನ ತೋರಿದೆ. ಲಂಕಾ ವಿರುದ್ಧವೇ ತಂಡ 213ಕ್ಕೆ ಆಲೌಟಾಗಿದ್ದನ್ನು ಮರೆಯುವಂತಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಬ್ಯಾಟರ್‌ಗಳು ಲಂಕಾ ಸ್ಪಿನ್ನರ್‌ಗಳ ಮುಂದೆ ಜವಾಬ್ದಾರಿ ಅರಿತು ಆಡಬೇಕಿದೆ. ರೋಹಿತ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ ಮೇಲೆ ಹೆಚ್ಚಿನ ನಿರೀಕ್ಷೆ ಇದ್ದು, ಕೆ.ಎಲ್.ರಾಹುಲ್, ಇಶಾನ್ ಕಿಶನ್ ನಿರ್ಣಾಯಕ ಪಂದ್ಯದಲ್ಲಿ ಅಬ್ಬರಿಸುವ ಅನಿವಾರ್ಯತೆ ಇದೆ. ಹಾರ್ದಿಕ್ ಜೊತೆ ರವೀಂದ್ರ ಜಡೇಜಾ, ಶಾರ್ದೂಲ್ ಆಲ್ರೌಂಡ್ ಬ್ಯಾಟಿಂಗ್‌ನಲ್ಲಿ ಮಿಂಚದಿದ್ದರೆ ಗೆಲುವು ಕಷ್ಟಸಾಧ್ಯ. ಇನ್ನು, ಬೌಲಿಂಗ್ ವಿಭಾಗದಲ್ಲಿ ಕುಲ್ದೀಪ್ ಯಾದವ್ ಟ್ರಂಪ್ ಕಾರ್ಡ್ ಎನಿಸಿಕೊಂಡಿದ್ದು, ಬೂಮ್ರಾ, ಸಿರಾಜ್ ಮೇಲೆ ಲಂಕಾ ಬ್ಯಾಟರ್‌ಗಳನ್ನು ಕಟ್ಟಿಹಾಕಬೇಕಾದ ಜವಾಬ್ದಾರಿಯಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…