ಕಾರವಾರ: 14 ವಿಧ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಜನತಾ ಶಾಲೆಯಲ್ಲಿ ನಡೆದಿದೆ.
9 ಮತ್ತು 10 ನೇ ತರಗತಿಯ ಒಟ್ಟು 14 ವಿಧ್ಯಾರ್ಥಿನಿಯರು ಎಡಗೈ ತೋಳಿನ ಕೆಳಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಇರಲ್ಲಿ ಕೆಲವು ವಿದ್ಯಾರ್ಥಿನಿಯರು ಕೈ ಮೇಲೆ ಸ್ಟೆಪ್ಲರ್ ಪಿನ್ ನಿಂದ ಗೀರಿಕೊಂಡು ಕೈ ನರ ಕತ್ತರಿಸಿಕೊಳ್ಳಲು ಯತ್ನ ನಡೆಸಿದ್ದಾರೆ. ಶಾಲೆಯಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದ್ದು ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದರೋ ಅಥವಾ ಶಾಲೆಯಲ್ಲಿ ಯತ್ನಿಸಿದರೋ ಮಾಹಿತಿ ಹೊರಬರಬೇಕಿದೆ.
ಆತ್ಮಹತ್ಯೆ ಯತ್ನಕ್ಕೆ ಕಾರಣ ನಿಗೂಢವಾಗಿದೆ. ಕೆಲವು ವಿದ್ಯಾರ್ಥಿನಿಯರು ಗೇಮ್ ಆಟದ ಟಾಸ್ಕ್ ಎಂದರೆ ಇನ್ನೂ ಕೆಲವರು ಬೇರೆಯೇ ಸಬೂಬು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಪೊಲೀಸರೊಂದಿಗೆ ಪೋಷಕರ ಸಭೆ ನಡೆಸಿ ಮಾಹಿತಿ ಕಲೆಹಾಕುವ ಪ್ರಯತ್ನ ನಡೆಸುತ್ತಿದ್ದು ತನಿಖೆ ನಡೆಯುತ್ತಿದೆ.
ಘಟನೆ ಸಂಬಂಧ ದಾಂಡೇಲಿ ನಗರ ಠಾಣೆಯಲ್ಲಿ ದೂರು ನೀಡಲಾಗಿದ್ದು ಈವರೆಗೂ ಪ್ರಕರಣ ದಾಖಲಾಗಿಲ್ಲ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…