ಮಂಗಳೂರು, ಸೆ. 17 :ಟೆಲಿಗ್ರಾಂ ನಲ್ಲಿ ಬಂದ ಆನ್ಲೈನ್ ಪಾರ್ಟ್ ಟೈಂ ಕೆಲಸದ ಸಂದೇಶವನ್ನು ನಂಬಿದ ವ್ಯಕ್ತಿಯೋರ್ವ 9,29,986 ರೂ. ಕಳೆದುಕೊಂಡಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾರೋ ಅಪರಿಚಿತ ಟೆಲಿಗ್ರಾಂ ಮೂಲಕ ಪಾರ್ಟ್ ಟೈಂ ಆನ್ಲೈನ್ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದನು. ಸಂದೇಶವನ್ನು ನಂಬಿದ ದೂರುದಾರ ಲಿಂಕ್ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್ ಲಭಿಸಿದ್ದು, ಅದರಲ್ಲಿ 1,044 ರೂ.ಗಳನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ. ಅನಂತರ ಹೆಚ್ಚಿನ ಕಮಿಷನ್ ಆಸೆಯಿಂದ ಮುಂದಿನ ಟಾಸ್ಕ್ ಪೂರ್ಣಗೊಳಿಸಲು 10 ಸಾವಿರ ರೂ.ಡೆಪಾಸಿಟ್ ಮಾಡಿದ್ದಾರೆ. ಬಳಿಕ ಹಂತ ಹಂತವಾಗಿ ಆಟವಾಡಿ 53,848 ರೂ. ತಮ್ಮ ಖಾತೆಗೆ ವಿತ್ ಡ್ರಾ ಮಾಡಿದ್ದಾರೆ.
ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದರೆ, ಹೆಚ್ಚು ಕಮಿಷನ್ ಗಳಿಸಬಹುದು ಎನ್ನುವ ಆಸೆಯಿಂದ ಟಾಸ್ಕ್ ಗಾಗಿ ತಮ್ಮ ವಿವಿಧ ಖಾತೆಯಿಂದ 9.29 ಲಕ್ಷ ರೂ. ಅಪರಿಚಿತ ವ್ಯಕ್ತಿಯ ಖಾತೆಗೆ ವರ್ಗಾವಣೆ ಮಾಡಿದ್ದಾರೆ. ಆದರೆ ಅನಂತರ ಯಾವುದೇ ಟಾಸ್ಕ್ ನೀಡದೇ ವಂಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…