ದೇಶ

ವಿಶೇಷ ಅಧಿವೇಶನ: 75 ವರ್ಷದ ಪಯಣದೊಂದಿಗೆ ಹಳೆ ಸಂಸತ್ ಭವನಕ್ಕೆ ವಿದಾಯ

ನವದೆಹಲಿ, ಸೆ. 18: ಇಂದಿನಿಂದ ಐದು ದಿನಗಳ ಕಾಲ ವಿಶೇಷ ಅಧಿವೇಶನ ಪ್ರಾರಂಭವಾಗಲಿದ್ದು, ಸಂಸತ್ತಿನ 75 ವರ್ಷಗಳ ಪಯಣ ಮತ್ತು ಸೆಪ್ಟೆಂಬರ್ 19 ರಂದು ನೂತನ ಕಟ್ಟಡಲ್ಲಿ ಅಧಿವೇಶ ಹಾಗೂ ಕಡೇ ಅಧಿವೇಶನದ ಮೂಲಕ ಹಳೆ ಕಟ್ಟಡಕ್ಕೆ ಭಾವನಾತ್ಮಕ ವಿದಾಯದ ನಡುವೆ ಸರ್ಕಾರವು ಕೆಲವು ಪ್ರಮುಖ ಮಸೂದೆಗಳನ್ನು ಮಂಡಿಸಲು ಮುಂದಾಗಲಿದೆ.

Advertisement
Advertisement
Advertisement

ಇಂದು ಮೊದಲ ದಿನದ ಅಧಿವೇಶನ ಹಳೆಯ ಕಟ್ಟಡದಲ್ಲಿ ನಡೆಯುತ್ತಿದ್ದು, ಬಳಿಕ ನಾಳೆಯಿಂದ ಹೊಸ ಸಂಸತ್ತಿನಲ್ಲಿ ಪ್ರಾರಂಭವಾಗಲಿದೆ. ಹೊಸ ಕಟ್ಟಡ ಮತ್ತು ವಿಶೇಷ ಅಧಿವೇಶನದ ಆರಂಭದೊಂದಿಗೆ ಸಂಸತ್ತಿನ ಉಭಯ ಸದನಗಳ ಸಿಬ್ಬಂದಿಗೆ ಹೊಸ ಸಮವಸ್ತ್ರವೂ ಬರುತ್ತದೆ. ಇವರಲ್ಲಿ ಚೇಂಬರ್ ಅಟೆಂಡೆಂಟ್‌ಗಳು, ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ಚಾಲಕರು ಮತ್ತು ಮಾರ್ಷಲ್‌ಗಳು ವಿಶೇಷ ಅಧಿವೇಶನದಲ್ಲಿ ಹೊಸ ಸಮವಸ್ತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮೊದಲ ದಿನ ರಾಜ್ಯಸಭೆಯಲ್ಲಿ 75 ವರ್ಷಗಳ ಸಂಸದೀಯ ಪಯಣ, ಸಾಧನೆ, ಅನುಭವ ಇತ್ಯಾದಿಗಳ ಕುರಿತು ಚರ್ಚೆಯಾಗಲಿದೆ. ಬಳಿಕ ಪೋಸ್ಟ್ ಆಫೀಸ್ ಬಿಲ್, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತದೆ. ಇದಲ್ಲದೆ, ವಕೀಲರ ತಿದ್ದುಪಡಿ ಮಸೂದೆ-2023, ಪತ್ರಿಕೆ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ-2023 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ವರದಿಯಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago