3 ದಿನಗಳ ಬಳಿಕ ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌

0
86

ಬೆಂಗಳೂರು, ಸೆ 18 : ಉದ್ಯಮಿಗೆ ವಂಚನೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಚೈತ್ರಾ ಕುಂದಾಪುರಳನ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

ವೈದ್ಯಕೀಯ ತಪಾಸಣೆ ನಂತರ ಎಲ್ಲಾ ವರದಿಗಳು ನಾರ್ಮಲ್‌ ಬಂದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಅಸ್ಪತ್ರೆಯಿಂದ ನೇರವಾಗಿ ಪೊಲೀಸರು ಸಿಸಿಬಿ ಕಚೇರಿಗೆ ಕರೆತಂದಿದ್ದಾರೆ. ಚೈತ್ರಾಳ ತಲೆ ಹಾಗೂ ಮುಖಕ್ಕೆ ಮಾಸ್ಕ್‌ ಕಟ್ಟಿಸಿ ಆಸ್ಪತ್ರೆ ಹಿಂಬಾಗಿಲಿನಿಂದ ಪೊಲೀಸರು ಕರೆ ತಂದಿದ್ದಾರೆ.

ಇಂದಿನಿಂದಲೇ ವಿಚಾರಣೆ ನಡೆಸಲು ಎಲ್ಲಾ ಹಂತದ ಸಿದ್ಧತೆ ಮಾಡಿಕೊಂಡಿದ್ದಾರೆ. ಐದಾರು ದಿನಗಳ ಕಾಲ ಕಸ್ಟಡಿಯಲ್ಲಿ ವಿಚಾರಣೆ ನಡೆಸಿ, ನಂತರ ಸ್ಥಳ ಮಹಜರು ನಡೆಸಬೇಕು. ಬಳಿಕ ಉಳಿದ ಆರೋಪಿಗಳನ್ನೂ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರಳನ್ನ ಸಿಸಿಬಿ ಪೊಲೀಸರು ಸೆಪ್ಟೆಂಬರ್ 15 ರಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದರು.

LEAVE A REPLY

Please enter your comment!
Please enter your name here