ಐಸಿಸಿ ನೂತನ ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.
ಏಷ್ಯಾಕಪ್ ಫೈನಲ್ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಸಿರಾಜ್ 7 ಓವರ್ಗಳಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ 8 ಸ್ಥಾನ ಮೇಲೇರಿದ್ದಾರೆ.
ಕಳೆದ ಶ್ರೇಯಾಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದ ಸಿರಾಜ್ ಈ ಬಾರಿ 8 ಸ್ಥಾನ ಜಿಗಿತ ಕಂಡಿದ್ದಾರೆ. ಈ ಮೂಲಕ ಒಟ್ಟು 694 ರೇಟಿಂಗ್ ಪಡೆದು ಅಗ್ರಸ್ಥಾನ ಅಲಂಕರಿಸಿದ್ದಾರೆ.