ಕುಖ್ಯಾತ ರೌಡಿ ತಲ್ಲತ್ ನ ಬಂಧನ

0
126

ಮಂಗಳೂರು, ಸೆ.20: ಕುಖ್ಯಾತ ನಟೋರಿಯಸ್ ರೌಡಿ ತಲ್ಲತ್ (39) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗೋವಾ, ಮುಂಬೈನಲ್ಲಿದ್ದು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ತಲ್ಲತ್. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿ ಯಾಗಿದ್ದ. ಇನ್ನು ಈತ ಗ್ಯಾಂಗ್ ಕಟ್ಟಿಕೊಂಡು ಹವಾ ಸೃಷ್ಠಿಸಲು ಯತ್ನಿಸುತ್ತಿದ್ದ. ಇದೀಗ ಮುಂಬೈನಿಂದ ತಲ್ಲತ್, ಊರಿಗೆ ಬಂದಿದ್ದ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು. ನಗರದ ಕೊಟ್ಟಾರ ಎಂಬಲ್ಲಿ ಬಂಧಿಸಿದ್ದಾರೆ.

ಇನ್ನು ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಇನ್ನು ಆರೋಪಿ ತಲ್ಲತ್ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಜೊತೆಗೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೂಡ ಹಲ್ಲೆ ಪ್ರಕರಣ ಸೇರಿದಂತೆ 28 ಪ್ರಕರಣಗಳಲ್ಲಿ ತಲ್ಲತ್ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

LEAVE A REPLY

Please enter your comment!
Please enter your name here