ರಾಷ್ಟ್ರ

ಕರ್ನಾಟಕದ ರೈತರ ಪರ ‘ಆನ್​ಲೈನ್ ಬೆಂಬಲ’ ವ್ಯಕ್ತಪಡಿಸಲಾರಂಭಿಸಿದ ನಟರು

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೊಮ್ಮೆ ಕಾವೇರಿ ವಿವಾದ ತಲೆ ಎತ್ತಿದೆ. ಕಾವೇರಿ ನದಿ ನೀರನ್ನು ಹರಿಸುವಂತೆ ನ್ಯಾಯಾಲಯ ಆದೇಶಿಸಿದೆ. ಈ ಕುರಿತಾಗಿ ಸರ್ಕಾರವು ಸರ್ವಪಕ್ಷ ಸಭೆ ಕರೆದಿದ್ದು, ಚರ್ಚಿಸಿ ನಿರ್ಣಯ ಕೈಗೊಳ್ಳಲಿದೆ. ಈ ನಡುವೆ ಮಂಡ್ಯ, ಮೈಸೂರು ಇನ್ನೂ ಕೆಲವೆಡೆಗಳಲ್ಲಿ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯ ಮಾಡಿ ಪ್ರತಿಭಟನೆಗಳು ಆರಂಭವಾಗಿವೆ. ಚಿತ್ರರಂಗದವರು ಕಾವೇರಿ ಕುರಿತಾಗಿ ಪ್ರತಿಕ್ರಿಯಿಸಬೇಕೆಂದು ಒತ್ತಾಯಿಸಿ ಇಂದು (ಸೆಪ್ಟೆಂಬರ್ 20) ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಅದರ ಬೆನ್ನಲ್ಲೆ ಕೆಲವು ನಟರು ಟ್ವೀಟ್ ಮಾಡಿ ‘ಆನ್​ಲೈನ್ ಬೆಂಬಲ’ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement

ಕಾವೇರಿ ವಿವಾದದ ಕುರಿತಾಗಿ ಟ್ವೀಟ್ ಮಾಡಿರುವ ನಟ ಸುದೀಪ್, ”ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದಿದ್ದಾರೆ.

ನಟ ದರ್ಶನ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದಿದ್ದಾರೆ.

ಇನ್ನು ನಟ, ರಾಜ್ಯಸಭೆ ಸದಸ್ಯರೂ ಆಗಿರುವ ಜಗ್ಗೇಶ್ ಟ್ವೀಟ್ ಮಾಡಿ, ”ನಾನು ಕನ್ನಡ ಚಿತ್ರರಂಗದಲ್ಲಿ 42 ವರ್ಷಕಾಲ ಸೇವೆಸಲ್ಲಿಸಿ ಕನ್ನಡಿಗರಪ್ರೀತಿ ಅಭಿಮಾನಕ್ಕೆ ಪಾತ್ರನಾಗಿದ್ದೇನೆ. ತಿಂಗಳ ಹಿಂದೆ ಕರ್ನಾಟಕ ರಾಜ್ಯ ಸರ್ಕಾರ ಕರೆದಿದ್ದ ಸರ್ವಪಕ್ಷಸಭೆಗೆ ಹಾಜರಾಗಿ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಡಿಕೆಶಿ ರವರ ಮುಂದೆ ಕಾವೇರಿ ನದಿಯ ನೀರಿನ ವಿಚಾರವಾಗಿ ನಮ್ಮ ಬೆಂಬಲ ಸದಾ ಕನ್ನಡಿಗರ ಪರವಾಗಿಯೇ ಇದೆ ಎಂದು ತಿಳಿಸಿ ಬಂದಿದ್ದೆ. ನಾಳೆ ದೆಹಲಿಯಲ್ಲಿ ಕರ್ನಾಟಕ ಸರ್ವಪಕ್ಷ ಸಭೆ ಆಯೋಜಿಸಲಾಗಿದೆ ಅದರಲ್ಲೂ ಭಾಗಿಯಾಗಿ “ಕಾವೇರಿ ನದಿಯ” ಪರವಾಗಿ ಹಾಗೂ ಕನ್ನಡದ ರೈತರ ಪರವಾಗಿ ನನ್ನ ಧ್ವನಿಯನ್ನು ಪ್ರಸ್ತಾಪಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ದರ್ಶನ್, ಸುದೀಪ್ ಅವರುಗಳು ಟ್ವೀಟ್ ಮಾಡಿದ ಹಲವು ನಟ-ನಟಿಯರು ಕಾವೇರಿ ಪರವಾಗಿ ಟ್ವೀಟ್ ಮಾಡಲು ಆರಂಭಿಸಿದ್ದಾರೆ. ಫೈಟರ್ ಸಿನಿಮಾದ ಪ್ರಚಾರದಲ್ಲಿರುವ ನಟ ವಿನೋದ್ ಪ್ರಭಾಕರ್, ಕಾವೇರಿ ಪರವಾಗಿ ಮಾತನಾಡಿದ್ದಾರೆ. ಕಾವೇರಿ ಕರ್ನಾಟಕದ ಹಕ್ಕು ಎಂದಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago