ದೇಶ

‘ನಾರಿ ಶಕ್ತಿ ವಂದನಾ ಅಧಿನಿಯಮ’ವನ್ನು ಲೋಕಸಭೆ ಅಂಗೀಕರಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ ಮೋದಿ

ನವದೆಹಲಿ, ಸೆ. 20: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ ‘ನಾರಿ ಶಕ್ತಿ ವಂದನಾ ಅಧಿನಿಯಮ’ವನ್ನು ಲೋಕಸಭೆ ಅಂಗೀಕರಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಮಸೂದೆಯನ್ನು ಬೆಂಬಲಿಸಿ ಮತ ಚಲಾಯಿಸಿದವರಿಗೆ ಪಕ್ಷಾತೀತವಾಗಿ ಬೆಂಬಲ ಸಲ್ಲಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ.

Advertisement
Advertisement
Advertisement

‘ಅಂತಹ ಅದ್ಭುತ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಸಂವಿಧಾನದ (ನೂರಾ ಇಪ್ಪತ್ತೆಂಟನೇ ತಿದ್ದುಪಡಿ) ಮಸೂದೆ, 2023 ರ ಅಂಗೀಕಾರಗೊಂಡಿರುವುದರಿಂದ ಸಂತೋಷವಾಗಿದೆ. ಈ ವಿಧೇಯಕವನ್ನು ಬೆಂಬಲಿಸಿ ಮತ ಹಾಕಿದ ಸಂಸದರಿಗೆ ಪಕ್ಷಾತೀತವಾಗಿ ಧನ್ಯವಾದ ಸಲ್ಲಿಸುತ್ತೇನೆ. ನಾರಿ ಶಕ್ತಿ ವಂದನ್ ಅಧಿನಿಯಮ್ ಒಂದು ಐತಿಹಾಸಿಕ ಶಾಸನವಾಗಿದ್ದು, ಇದು ಮಹಿಳಾ ಸಬಲೀಕರಣವನ್ನು ಮತ್ತಷ್ಟು ಹೆಚ್ಚಿಸುತ್ತದೆ. ನಮ್ಮ ರಾಜಕೀಯ ಪ್ರಕ್ರಿಯೆಯಲ್ಲಿ ಮಹಿಳೆಯರು ಇನ್ನೂ ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುತ್ತದೆ’ ಎಂದು ಮೋದಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿ ಎಕ್ಸ್​ ಸಂದೇಶ

ನಾರಿ ಶಕ್ತಿ ವಂದನ್ ಕಾಯ್ದೆಯೊಂದಿಗೆ ಹೊಸ ಸದನವು ಉತ್ತಮ ಆರಂಭವನ್ನು ಪಡೆದಿದೆ. ಇದು ಮಹಿಳಾ ನೇತೃತ್ವದ ಅಭಿವೃದ್ಧಿಗೆ ಅಭೂತಪೂರ್ವ ವೇಗವನ್ನು ನೀಡಲಿದೆ. ಇದು ಎಲ್ಲಾ ರಾಜಕೀಯ ಪಕ್ಷಗಳಿಂದ ಐತಿಹಾಸಿಕ ಬೆಂಬಲವನ್ನು ಪಡೆದಿದೆ. ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ಸಂಕಲ್ಪವನ್ನು ಈಡೇರಿಸುವಲ್ಲಿ ಇದು ಒಂದು ಮೈಲಿಗಲ್ಲು ಎಂಬುದು ಸಾಬೀತಾಗಿದೆ. ಎಲ್ಲ ಸಂಸದರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಮತ್ತೊಂದು ಪೋಸ್ಟ್​​ನಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಲೋಕಸಭೆಯಲ್ಲಿ ಸುದೀರ್ಘ 8 ಗಂಟೆಗಳ ಕಾಲ ಚರ್ಚೆ ನಂತರ ಸ್ಪೀಕರ್ ಓಂಬಿರ್ಲಾ ಬುಧವಾರ ರಾತ್ರಿ ಮಸೂದೆಯನ್ನು ಮತಕ್ಕೆ ಹಾಕಿದ್ದಾರೆ. ಆನಂತರ ಮತ ಪತ್ರಗಳ ಮೂಲಕ ಸಂಸದರು ಮತ ಚಲಾಯಿಸಿದ್ದಾರೆ.ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ 213 ಸದಸ್ಯರ ಬೆಂಬಲ ಅಗತ್ಯವಿತ್ತು. ಪರವಾಗಿ 454 ಸಂಸದರು ಮತದಾನ ಮಾಡಿದ್ದರೆ ವಿಧೇಯಕದ ವಿರುದ್ಧ ಇಬ್ಬರು ಸಂಸದರು ಮತ ಚಲಾಯಿಸಿದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago